ADVERTISEMENT

ಸರ್ಕಾರಿ ನೌಕರರಿಗೆ ಗುರುತಿನ ಚೀಟಿ ಧರಿಸುವುದು ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 20:05 IST
Last Updated 4 ನವೆಂಬರ್ 2020, 20:05 IST

ಬೆಂಂಗಳೂರು: ಇನ್ನು ಮುಂದೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯದ ಅವಧಿಯಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ
ತಮ್ಮ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಕೊರಳಿಗೆ ಧರಿಸಿ, ಪ್ರದರ್ಶಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಲ್ಲದೆ, ಅಧಿಕಾರಿಗಳು ಮತ್ತು ಸಿಬ್ಬಂದಿ ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ತಮ್ಮ ಹೆಸರು ಮತ್ತು ಹುದ್ದೆ ಸೂಚಿಸುವ ನಾಮಫಲಕವನ್ನು ಕೂಡಾ ಕಡ್ಡಾಯವಾಗಿ ಅಳವಡಿಸಿಕೊಳ್ಳ
ಬೇಕು ಎಂದೂ ಆದೇಶದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್‌) ಸೂಚಿಸಿದೆ.

ಈ ಆದೇಶವನ್ನು ಪಾಲಿಸುವಂತೆ ಎಲ್ಲ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳು ತಮ್ಮ ಅಧೀನ ಕಾರ್ಯದರ್ಶಿಗಳಿಗೆ ಹಾಗೂ
ನಿಗಮ– ಮಂಡಳಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಬೇಕು ಎಂದೂ ತಿಳಿಸಲಾಗಿದೆ.

ADVERTISEMENT

ಈ ವ್ಯವಸ್ಥೆ ಅಳವಡಿಕೊಂಡರೆ ಸಾರ್ವಜನಿಕರು ತಮ್ಮ ಕಾರ್ಯಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನೇರವಾಗಿ ಭೇಟಿಯಾಗಲು ಅನುಕೂಲ ಆಗಲಿದೆ. ಅಲ್ಲದೆ, ಕರ್ತವ್ಯದಲ್ಲಿ ಪಾರದರ್ಶಕತೆ ತರಲು ಈ ಕ್ರಮ ಅಗತ್ಯವಾಗಿದೆ. ಬ್ಯಾಂಕುಗಳು ಮತ್ತು ಅಂಚೆ ಕಚೇರಿಗಳಲ್ಲಿ ಈಗಾಗಲೇ ಈ ವ್ಯವಸ್ಥೆ ಇದೆ’ ಎಂದೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.