ADVERTISEMENT

ರಾಜ್ಯದಲ್ಲಿ ಎಂಟು ಇಎಸ್‌ಐ ಆಸ್ಪತ್ರೆಗೆ ಒಪ್ಪಿಗೆ: ಕೇಂದ್ರ ಸರ್ಕಾರ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2023, 14:34 IST
Last Updated 14 ಡಿಸೆಂಬರ್ 2023, 14:34 IST
ಕಲಬುರ್ಗಿಯ ಇಎಸ್‌ಐ ಆಸ್ಪತ್ರೆ
ಕಲಬುರ್ಗಿಯ ಇಎಸ್‌ಐ ಆಸ್ಪತ್ರೆ   

ನವದೆಹಲಿ: ಕರ್ನಾಟಕದ ಎಂಟು ಕಡೆಗಳಲ್ಲಿ ಇಎಸ್‌ಐ ಆಸ್ಪತ್ರೆಗಳನ್ನು ಆರಂಭಿಸಲು ಉದ್ಯೋಗಿಗಳ ರಾಜ್ಯ ವಿಮಾ ನಿಗಮ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆಯ ರಾಜ್ಯ ಸಚಿವ ರಾಮೇಶ್ವರ ತೇಲಿ ತಿಳಿಸಿದರು. 

ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ನಾರಾಯಣ ಕೊರಗಪ್ಪ ಗುರುವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರಿನ ಬೊಮ್ಮಸಂದ್ರದಲ್ಲಿ 200 ಬೆಡ್‌, ದೊಡ್ಡಬಳ್ಳಾಪುರ, ಶಿವಮೊಗ್ಗ, ನರಸಾಪುರ, ಹಾರೋಹಳ್ಳಿ, ಬಳ್ಳಾರಿ, ತುಮಕೂರು ಹಾಗೂ ಉಡುಪಿಯಲ್ಲಿ ತಲಾ 100 ಬೆಡ್‌ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT