ADVERTISEMENT

ವೈದ್ಯರ ರಕ್ಷಣೆಗೆ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ: ಸಚಿವ ಡಾ. ಕೆ. ಸುಧಾಕರ್

​ಪ್ರಜಾವಾಣಿ ವಾರ್ತೆ
Published 4 ಜುಲೈ 2020, 8:14 IST
Last Updated 4 ಜುಲೈ 2020, 8:14 IST
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್   

ಬೆಂಗಳೂರು: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ವೈದ್ಯರು ವೀರ ಯೋಧರಾಗಿದ್ದಾರೆ. ಅವರ ಸುರಕ್ಷತೆಗೆ ಎಲ್ಲ ಅಗತ್ಯ ಕ್ರಮಗಳನ್ನು ರಾಜ್ಯಸರ್ಕಾರ ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್ ವಿರುದ್ಧ ನಮ್ಮ ವೈದ್ಯರು ಮುಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ವೀರಯೋಧರಾಗಿದ್ದು, ಅವರ ಸುರಕ್ಷತೆಗೆ ಎಲ್ಲ ಅಗತ್ಯ ಕ್ರಮಗಳನ್ನು ರಾಜ್ಯಸರ್ಕಾರ ಕೈಗೊಂಡಿದೆ. ಕಿಮ್ಸ್‌ನಲ್ಲಿ ವೈದ್ಯರಿಗೆ ದೋಷಪೂರಿತ ಪಿಪಿಇ, ಎನ್95 ಮಾಸ್ಕ್ ಕುರಿತ ದೂರಿನ ಬಗ್ಗೆ ನಾನೀಗಾಗಲೇ ತನಿಖೆಗೆ ಆದೇಶಿಸಿದ್ದೇನೆ. ಆರೋಪ ಸಾಬೀತಾದಲ್ಲಿ ಆಡಳಿತ ಮಂಡಳಿ ಹೊಣೆಗಾರರಾಗುತ್ತಾರೆ ಎಂದು ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ನಮ್ಮ ಸುರಕ್ಷತೆ ಜೊತೆಗೆ ಇನ್ನೊಬ್ಬರ ಸುರಕ್ಷತೆಗೆ ಅಪಾಯ ಬೇಡ ಎನ್ನುವ ಎಚ್ಚರ ಎಲ್ಲರಲ್ಲೂ ಮೂಡಲಿ ಎನ್ನುವುದಕ್ಕಾಗಿ ಈ ವೀಡಿಯೊ ಹಂಚಿಕೊಳ್ಳುತ್ತಿದ್ದೇನೆ. ಬಳಸಿ ತ್ಯಜಿಸುವ ಮಾಸ್ಕ್‌ಗಳನ್ನು ಕಾಗದದಲ್ಲಿ ಸುತ್ತಿ, ಕೆಂಪು ಶಾಯಿಯಲ್ಲಿ ಗುರುತು ಹಾಕಿ ತ್ಯಾಜ್ಯ ಸಂಗ್ರಹಿಸುವವರಿಗೆ ನೀಡೋಣ, ಜವಾಬ್ದಾರಿಯುತ ನಾಗರಿಕರಾಗೋಣ ಎಂದು ವಿಡಿಯೊವನ್ನು ಶೇರ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.