ADVERTISEMENT

ಪಕ್ಷೇತರ ಶಾಸಕರು ಬೆಂಬಲ ಹಿಂಪಡೆದಿರುವುದರಿಂದ ಸರ್ಕಾರ ಅಸ್ಥಿರವಾಗಲ್ಲ: ಪರಮೇಶ್ವರ್

​ಪ್ರಜಾವಾಣಿ ವಾರ್ತೆ
Published 15 ಜನವರಿ 2019, 10:46 IST
Last Updated 15 ಜನವರಿ 2019, 10:46 IST
   

ಬೆಂಗಳೂರು: ಪಕ್ಷೇತರ ಶಾಸಕರು ಯಾವ ಕಾರಣಕ್ಕೆ ಬೆಂಬಲ ಹಿಂಪಡೆದಿದ್ದಾರೆ ಎಂಬುದು ಗೊತ್ತಿಲ್ಲ, ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ, ಇದರಿಂದ ಮೈತ್ರಿ ಸರ್ಕಾರ ಅಸ್ಥಿರವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ಮಂಗಳವಾರ ಹೇಳಿದ್ದಾರೆ.

ಅವರು ಬೆಂಬಲ ಹಿಂಪಡೆದಿರುವುದರಿಂದ ಸರ್ಕಾರ ಅಸ್ಥಿರವಾಗುವುದಿಲ್ಲ, ಅಗತ್ಯ ಸಂಖ್ಯಾ ಬಲ ನಮ್ಮ ಬಳಿ ಇದೆ ಎಂದುಹೇಳಿದರು.

ಬಿಜೆಪಿ ನಾಯಕರು ನಮ್ಮ ಶಾಸಕರಿಗೆ ಅಧಿಕಾರದ ಆಸೆ, ಆಮೀಷ ತೋರಿಸಿದ್ದಾರೆ. ಕೆಲವು ಶಾಸಕರನ್ನು ಮುಂಬೈನಲ್ಲಿ ಹಿಡಿದಿಟ್ಟುಕೊಂಡಿದ್ದಾರೆ ಎಂದು ಪರಮೇಶ್ವರ್ ಆರೋಪಿಸಿದ್ದಾರೆ.

ADVERTISEMENT

ಬಿಜೆಪಿಯವರು ಎಷ್ಟು ಜನ ಶಾಸಕರನ್ನು ಕರೆದುಕೊಂಡು ಹೋಗಿದ್ದಾರೆ ಎಂಬುದು ತಿಳಿದಿಲ್ಲ, ಅವರು ಹೇಗೆ ನಡೆದುಕೊಳ್ಳುತ್ತಿದ್ದಾರೆ ಎಂಬುದು ಇಡೀ ದೇಶಕ್ಕೆ ಗೊತ್ತಾಗುತ್ತಿದೆ ಎಂದು ಪರಮೇಶ್ವರ್ ಹೇಳಿದರು.

ಬಿಜೆಪಿಯವರು ಸಮ್ಮಿಶ್ರ ಸರ್ಕಾರವನ್ನು ಕೆಡವಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಬೆಲೆ ಇದೆ ಹಾಗಾಗಿ ನಮ್ಮಸರ್ಕಾರವಂತೂ ಅಸ್ಥಿರವಾಗುವುದಿಲ್ಲ ಎಂದು ಅವರು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.