ADVERTISEMENT

ಚಾಮರಾಜನಗರ ಘಟನೆ ತನಿಖೆ: ನಿವೃತ್ತ ನ್ಯಾಯಾಧೀಶ ಬಿ.ಎ.ಪಾಟೀಲ ನೇಮಕ

​ಪ್ರಜಾವಾಣಿ ವಾರ್ತೆ
Published 5 ಮೇ 2021, 11:27 IST
Last Updated 5 ಮೇ 2021, 11:27 IST
ಭಾನುವಾರ ರಾತ್ರಿ ಕೋವಿಡ್‌ ಆಸ್ಪತ್ರೆಯಲ್ಲಿ ರೋಗಿಗಳ ಆರೈಕೆ
ಭಾನುವಾರ ರಾತ್ರಿ ಕೋವಿಡ್‌ ಆಸ್ಪತ್ರೆಯಲ್ಲಿ ರೋಗಿಗಳ ಆರೈಕೆ   

ಬೆಂಗಳೂರು: ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೇ 24 ಮಂದಿ ಕೋವಿಡ್‌ ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಿರುವ ರಾಜ್ಯ ಸರ್ಕಾರ, ಇದಕ್ಕಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಬಿ.ಎ.ಪಾಟೀಲ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಹೈಕೋರ್ಟ್‌ ಕೂಡ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜ್ಯ ಸರ್ಕಾರ ಈಗಾಗಲೇ ಐಎಎಸ್‌ ಅಧಿಕಾರಿ ಶಿವಯೋಗಿ ಕಳಸದ್‌ ಅವರಿಂದ ತನಿಖೆ ನಡೆಸಿ ಮೂರು ದಿನಗಳಲ್ಲೇ ವರದಿ ಸಲ್ಲಿಸಲು ಸೂಚಿಸಿತ್ತು.

ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಚಾಮರಾಜನಗರ, ಮೈಸೂರು ಜಿಲ್ಲಾಧಿಕಾರಿಗಳು ಈ ಸಂಬಂಧಿತ ಎಲ್ಲ ದಾಖಲಾತಿಗಳನ್ನು ತನಿಖಾ ಸಮಿತಿಗೆ ಒ‍ಪ್ಪಿಸಲು ಆರೋಗ್ಯ ಇಲಾಖೆಗೆ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.