ADVERTISEMENT

ತಾಪಮಾನ ಹೆಚ್ಚಳ: ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 13:46 IST
Last Updated 11 ಏಪ್ರಿಲ್ 2021, 13:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಬಿಸಿಲಿನಿಂದಾಗಿ ತಾಪಮಾನದಲ್ಲಿ ತೀವ್ರ ಹೆಚ್ಚಳವಾಗಿರುವ ಕಾರಣದಿಂದ ಕಲಬುರ್ಗಿ ಮತ್ತು ಬೆಳಗಾವಿ ವಿಭಾಗದಒಂಬತ್ತು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೇ ಅಂತ್ಯದವರೆಗೂ ಸರ್ಕಾರಿಕಚೇರಿಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಭಾನುವಾರ ಆದೇಶ ಹೊರಡಿಸಿದೆ.

ಕಲಬುರ್ಗಿ ವಿಭಾಗದ ಎಲ್ಲ ಏಳು ಜಿಲ್ಲೆಗಳು ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರವರೆಗೆ ಬದಲಾವಣೆ ಮಾಡಲಾಗಿದೆ. ಸೋಮವಾರದಿಂದಲೇ ಈ ಅನ್ವಯವಾಗಲಿದೆ. ಮೇ ಅಂತ್ಯದವರೆಗೂ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಕಚೇರಿ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕರ್ತವ್ಯ ನಿರ್ವಹಿಸಬೇಕು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೋವಿಡ್‌–19 ಸೇರಿದಂತೆ ವಿಶೇಷ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸಿದಾಗ ಸಮಯ ಬದಲಾವಣೆಯ ಆದೇಶ ಅನ್ವಯವಾಗುವುದಿಲ್ಲ ಎಂದು ಇಲಾಖೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.