ADVERTISEMENT

ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ರಚನೆಗೆ ಸರ್ಕಾರ ಸಿದ್ಧ: ಸಚಿವ ಜಾರ್ಜ್

‘ಕಾನೂನು ತಿದ್ದುಪಡಿಗೆ ಕ್ರಮ’

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2018, 10:06 IST
Last Updated 3 ನವೆಂಬರ್ 2018, 10:06 IST

ಮಂಗಳೂರು: ಕೈಗಾರಿಕಾ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ರಚನೆ ಮಾಡಲು ಬೇಡಿಕೆ ಹೆಚ್ಚಾಗುತ್ತಿದೆ. ಸರ್ಕಾರವೂ ಇದಕ್ಕೆ ಒಪ್ಪಿದೆ. ಆದರೆ, ಅನುಷ್ಠಾನಕ್ಕೆ ತರಲು ಕಾನೂನಿನ ತೊಡಕಿದ್ದು, ಅದನ್ನು ನಿವಾರಿಸಲು ಕಾನೂನು ತಿದ್ದುಪಡಿ ಮಾಡಲಾಗುವುದು ಎಂದು ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಈಗಾಗಲೇ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಜತೆ ಚರ್ಚಿಸಲಾಗಿದೆ. ಶೀಘ್ರ ಕಾನೂನು ತಿದ್ದುಪಡಿ ಆಗಲಿದೆ ಎಂದರು.

ಕ್ಷಿಪ್ರ ಕಾರ್ಯಪಡೆ ಘಟಕ ಸ್ಥಾಪನೆಗೆ ರಾಜ್ಯ ಸರ್ಕಾರವೇ ಕೋರಿಕೆ ಸಲ್ಲಿಸಿತ್ತು. ಕೇಂದ್ರ ಸರ್ಕಾರ ಮಂಗಳೂರಿನಲ್ಲಿ ಘಟಕ ಸ್ಥಾಪನೆಗೆ ಮಂಜೂರಾತಿ ನೀಡಿದೆ. ಆರ್ ಎಎಫ್ ನಿಂದ ಜಾಗ ಪರಿಶೀಲಿಸಿ, ಒಪ್ಪಿದ ನಂತರ 50 ಎಕರೆ ಜಾಗ ನೀಡಲಾಗುವುದು ಎಂದು ತಿಳಿಸಿದರು.

ADVERTISEMENT

ಕೈಗಾರಿಕೆಗಳಿಗೆ ಅಗತ್ಯವಾದ ಮಾನವ ಸಂಪನ್ಮೂಲ ಅಭಿವೃದ್ಧಿ ಪಡಿಸುವುದು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಕೌಶಲಾಭಿವೃದ್ಧಿ ಇಲಾಖೆಯ ಮೂಲಕ ವಿಶೇಷ ಯೋಜನೆ ರೂಪಿಸಲಾಗಿವುದು ಎಂದರು.

ಮಂಗಳೂರಿನ ಪ್ಲಾಸ್ಟಿಕ್ ಪಾರ್ಕ್ ಗೆ ಸಂಬಂಧಿಸಿದಂತೆ 100 ಎಕರೆ ಜಾಗ ಗುರುತಿಸಲಾಗಿದೆ. ಒಂದು ವಾರದಲ್ಲಿ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.