ADVERTISEMENT

ಸಾರಿಗೆ ನೌಕರರ ವೇತನಕ್ಕೆ ಅನುದಾನ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 5:57 IST
Last Updated 12 ಜೂನ್ 2020, 5:57 IST
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ   

ಬೆಂಗಳೂರು: ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರ ಮೇ ತಿಂಗಳ ವೇತನಕ್ಕಾಗಿ ₹325.01 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

‘ಲೌಕ್‌ಡೌನ್‌ನಿಂದ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿರುವ ಕಾರಣ ವೇತನಕ್ಕಾಗಿ ಮುಖ್ಯಮಂತ್ರಿ ಅವರು ವಿಶೇಷ ಅನುದಾನ ನೀಡಿದ್ದಾರೆ’ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

‘ಅನುದಾನ ಬಿಡುಗಡೆಗೆ ಆದೇಶವಾಗಿದೆ. ಕಡತ ಖಜಾನೆಗೆ ಹೋಗಿ ಬರಲು ಒಂದೆರಡು ದಿನ ಕಾಲವಕಾಶ ಬೇಕಾಗಲಿದೆ. ಕಳೆದ ತಿಂಗಳಿನಂತೆ ಬಹುತೇಕ ಜೂನ್15ರಂದು ನಾಲ್ಕೂ ಸಂಸ್ಥೆಗಳ ನೌಕರರ ಖಾತೆಗೆ ವೇತನ ಜಮೆ ಆಗಲಿದೆ’ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.