
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಕುಂಭಮೇಳ ಕಾಲ್ತುಳಿತ ದುರಂತ ಸಂಬಂಧ ಸಹಾಯವಾಣಿಯನ್ನೂ ತೆರೆದಿದ್ದು, ಕುಂಭಮೇಳಕ್ಕೆ ಹೊರಟು ಕುಟುಂಬಸ್ಥರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ನೀಡಲು ಸರ್ಕಾರ ಕೋರಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಕುಂಭಮೇಳಕ್ಕೆ ಹೊರಟು ಕುಟುಂಬಸ್ಥರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ನೀಡಲು ಕೋರಿದೆ. ಈ ಸಹಾಯವಾಣಿಯನ್ನು ಸಂಪರ್ಕ ಮಾಡಬಹುದು:- 080-22340676
ಬಿಜೆಪಿ ನಾಯಕರ ಸಹಾಯದಿಂದ ಬೆಳಗಾವಿ ಜಿಲ್ಲೆಯಲ್ಲಿ 300ಕ್ಕಿಂತ ಹೆಚ್ಚು ಜನ ಕುಂಭಮೇಳಕ್ಕೆ ಪ್ರಯಾಣ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಈ ನಡುವೆ ಉತ್ತರ ಪ್ರದೇಶ ಸರ್ಕಾರ ಯಾವುದೇ ಮಾಹಿತಿ ನೀಡದ ಹಿನ್ನೆಲೆ ಕನ್ನಡಿಗರ ಹಿತರಕ್ಷಣೆಗಾಗಿ ಓರ್ವ ಐಎಎಸ್ ಅಧಿಕಾರಿ, ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಹಾಗೂ ಪೊಲೀಸ್ ಅಧಿಕಾರಿಯೊಬ್ಬರನ್ನೊಳಗೊಂಡ ಮೂರು ಜನರ ತಂಡವನ್ನು ಈಗಾಗಲೇ ಅಲ್ಲಿಗೆ ಕಳುಹಿಸಲಾಗಿದೆ ಎಂದರು.
ರಾಜ್ಯದ ವಿಪತ್ತು ನಿರ್ವಹಣಾ ತಂಡ ಉತ್ತರಪ್ರದೇಶ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದೆ. ಆದರೆ, ಉತ್ತರಪ್ರದೇಶ ಸರ್ಕಾರ ಪ್ರಯಾಗ್ರಾಜ್ ಕುಂಭಮೇಳ ದುರುಂತದಲ್ಲಿ ರಾಜ್ಯದ ಎಷ್ಟು ಜನ ಮೃತಪಟ್ಟಿದ್ದಾರೆ, ಎಷ್ಟು ಜನ ಗಾಯಾಳುಗಳಾಗಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಬೆಳಗಾವಿ ಜಿಲ್ಲಾಧಿಕಾರಿ ಸ್ವತಃ ಕುಂಭಮೇಳಕ್ಕೆ ತೆರಳಿದವರ ಕುಟುಂಬದವರನ್ನು ಸಂಪರ್ಕಿಸಿ ನಾಲ್ಕು ಜನ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.