ADVERTISEMENT

PHOTOS | ರಾಜ್ಯದಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ ಕ್ಷಣಗಳು

​ಪ್ರಜಾವಾಣಿ ವಾರ್ತೆ
Published 31 ಮೇ 2023, 14:05 IST
Last Updated 31 ಮೇ 2023, 14:05 IST
ಶಿರಾ ತಾಲ್ಲೂಕಿನ ಗಾಣದಹುಣಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಪ್ರಯುಕ್ತ ಬುಧವಾರ ಮಕ್ಕಳಿಗೆ ಗುಲಾಬಿ ಹಾಗೂ ಬಲೂನ್ ನೀಡಿ ಸ್ವಾಗತ ಕೋರಲಾಯಿತು
ಶಿರಾ ತಾಲ್ಲೂಕಿನ ಗಾಣದಹುಣಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಪ್ರಯುಕ್ತ ಬುಧವಾರ ಮಕ್ಕಳಿಗೆ ಗುಲಾಬಿ ಹಾಗೂ ಬಲೂನ್ ನೀಡಿ ಸ್ವಾಗತ ಕೋರಲಾಯಿತು   
ರಾಜ್ಯಾದ್ಯಂತ ಬುಧವಾರ ಶಾಲೆಗಳು ಆರಂಭವಾಗಿದ್ದು, ಮೊದಲ ದಿನವೇ ಮಕ್ಕಳು ಉತ್ಸಾಹದಿಂದ ಶಾಲೆಗಳತ್ತ ಹೆಜ್ಜೆ ಹಾಕಿದರು. ಹೊಸ ಹುರುಪಿನೊಂದಿಗೆ ತರಗತಿಗೆ ಹಾಜರಾದರು. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ತಳಿರು ತೋರಣ ಕಟ್ಟುವ ಮೂಲಕ ಶಿಕ್ಷಕರು ಮಕ್ಕಳನ್ನು ಸಂಭ್ರಮದಿಂದ ಮಕ್ಕಳನ್ನು ಬರಮಾಡಿಕೊಂಡರು. ಬಲೂನ್, ಗುಲಾಬಿ ಹೂ, ಸಮವಸ್ತ್ರ ವಿತರಣೆ, ಪುಸ್ತಕ ವಿತರಣೆ ಹೀಗೆ ನಾನಾ ಬಗೆಯಲ್ಲಿ ಮಕ್ಕಳನ್ನು ಸ್ವಾಗತಿಸಿದರು.
ಶಿರಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಬುಧವಾರ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು
ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ಸಿಆರ್‌ಪಿ ದೀಪು, ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ನಿರ್ದೇಶಕ ಟಿ.ಸತೀಶ್ ಜವರೇಗೌಡ, ಎಸ್‌ಡಿಎಂಸಿ ಸದಸ್ಯ ಮಂಚಪ್ಪ, ಮುಖ್ಯ ಶಿಕ್ಷಕಿ ಪುಷ್ಪಲತಾ ಬುಧವಾರ ವಿತರಿಸಿದರು
ಹೆಬ್ರಿ ಸಮೀಪದ ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶಾಲಾ ಪ್ರಾರಂಭೋತ್ಸವ ನಡೆಯಿತು
ಕೊಪ್ಪದ ಸಣ್ಣಕೆರೆ ಸರ್ಕಾರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ
ಮುಂಡಗೋಡ ತಾಲ್ಲೂಕಿನ ಮಳಗಿಯ ಇಂದಿರಾನಗರ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹೂವು ನೀಡಿ ಶಾಲೆಗೆ ಬರಮಾಡಿಕೊಳ್ಳಲಾಯಿತು
ಸುಂಟಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬುಧವಾರ ಸಮವಸ್ತ್ರ ಮತ್ತು ಪುಸ್ತಕಗಳನ್ನು ವಿತರಿಸಲಾಯಿತು
ಮಜೂರು ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಮಂಗಳ ವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು
ಗುಬ್ಬಿ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು
ಬೀರೂರಿನ ಶಾಸಕರ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶಾಲಾ ಮಕ್ಕಳನ್ನು ಸ್ವಾಗತಿಸಲು ಶಾಲೆಯ ಮುಂಭಾಗದಲ್ಲಿ ಹೂ ಮತ್ತು ಹಸಿರು ತಳಿರು ತೋರಣ ಹಾಗೂ ಕಮಾನನ್ನು ಬಲೂನ್‌ಗಳಿಂದ ಅಲಂಕಾರ ಮಾಡಲಾಗಿತ್ತು
ಕೊಡಿಗೇನಹಳ್ಳಿ ಹೋಬಳಿಯ ಕಸಿನಾಯಕನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದ ಶಾಲಾ ಆರಂಭೋತ್ಸವದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕ ವಿತರಿಸಲಾಯಿತು
ಹಾಸನದ ಎಸ್.ಆರ್.ಎಸ್. ಪ್ರಜ್ಞಾ ವಿದ್ಯಾಶಾಲೆಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.
ಕಾರವಾರದ ಬಝಾರ ಸರ್ಕಾರಿ ಶಾಲೆಯಲ್ಲಿ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಸತೀಶ ಸೈಲ್ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿದರು
ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ ಇಲ್ಲಿಯ ಪ್ರೌಢಶಾಲಾ ವಿಭಾಗದ ಶಾಲಾ ಆರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ರಾಜಾಜಿನಗರದ ಸರಕಾರಿ ಪ್ರೌಢ ಶಾಲೆ ಮಕ್ಕಳು ಶಾಲೆ ಪ್ರಾರಂಭದ ದಿನ ಸಂಭ್ರಮದಿಂದ ರಂಗೋಲಿ ಹಾಕುತ್ತಿರುವುದು ಕಂಡುಬಂತು./ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್
ರಾಜಾಜಿನಗರದ ಸರಕಾರಿ ಪ್ರೌಢ ಶಾಲೆ ಮಕ್ಕಳು ಶಾಲೆ ಪ್ರಾರಂಭದ ದಿನವನ್ನು ಸಂಭ್ರಮದಿಂದ ಬರಮಾಡಿದರು .ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್
ಸರಕಾರಿ ಪ್ರೌಢ ಶಾಲೆ ಮಕ್ಕಳು ಶಾಲೆ ಪ್ರಾರಂಭದ ದಿನವನ್ನು ಸಂಭ್ರಮದಿಂದ ಬರಮಾಡಿದರು .ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್
ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದಲ್ಲಿ ಮಕ್ಕಳಿಗೆ ಗ್ರಾ.ಪಂ ಅಧ್ಯಕ್ಷ ಬಿ.ಜಿ.ಶಿವಕುಮಾರ್ ಹೂಗುಚ್ಛ ನೀಡಿ ಸ್ವಾಗತಿಸಿದರು.
ಕೊಟ್ಟಿಗೆಹಾರ: ಬಣಕಲ್ ಶ್ರೀವಿದ್ಯಾಭಾರತಿ ಶಾಲೆಯಲ್ಲಿ ಪ್ರಾರಂಭೋತ್ಸವದಲ್ಲಿ ಮಕ್ಕಳನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು
ಕೊಳ್ಳೇಗಾಲದ ಎಸ್.ವಿ.ಕೆ ಪ್ರೌಢಶಾಲೆಗೆ ಬಂದ ಮಕ್ಕಳನ್ನು ಶಿಕ್ಷಕರು ಅದ್ಧೂರಿಯಾಗಿ ಸ್ವಾಗತಿಸಿದರು.
ಚಾಮರಾಜನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಮೇಲೆ ಪುಷ್ಪವೃಷ್ಟಿ ಮಾಡಿ ತರಗತಿಗಳಿಗೆ ಸ್ವಾಗತಿಸಿದರು
ಆನೇಕಲ್‌ ಪಟ್ಟಣದ ಹೆಣ್ಣು ಮಕ್ಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಎಂ.ಜಯಲಕ್ಷ್ಮೀ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಿದರು
ಹೊಸಕೋಟೆ: ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಅವರಿಗೆ ಬುದ್ಧ, ಡಾ.ಬಿ.ಆರ್.ಅಂಬೇಡ್ಕರ್ ಇರುವ ಭಾವಚಿತ್ರವನ್ನು ನೀಡಿ ಗೌರವಿಸಿದರು
ಹುಣಸೂರು ನಗರದ ಕಲ್ಕುಣಿಕೆ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ ಪುಸ್ತಕ, ಸಮವಸ್ತ್ರ ವಿತರಿಸಿ ಮಕ್ಕಳನ್ನು ಶಾಲೆಗೆ ಶಾಸಕ ಹರೀಶ್ ಗೌಡ ಸ್ವಾಗತಿಸಿದರು. ಬಿಇಒ ರೇವಣ್ಣ, ಸಂತೋಷ್, ನರಸಯ್ಯ, ದೇವರಾಜ್ ಇದ್ದರು
ಕಾರ್ಕಳ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪೆರುವಾಜೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು
ಹನಗೋಡು ಹೋಬಳಿಯ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು
ಯಲ್ಲಾಪುರ ತಾಲ್ಲೂಕಿನ ತೆಂಗಿನಗೇರಿ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳನ್ನು ಸೈಕಲ್ ಸವಾರಿ ಮೇಲೆ ಮೆರವಣಿಗೆ ಮಾಡಲಾಯಿತು
ಕುಂದಾಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡಾಡಿ–ಮತ್ಯಾಡಿ –1 ಮಕ್ಕಳ ಸಂಭ್ರಮ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.