ADVERTISEMENT

ಕೌನ್ಸೆಲಿಂಗ್‌ | 1300 ನೌಕರರ ವರ್ಗಾವಣೆ: ಪ್ರಿಯಾಂಕ್

​ಪ್ರಜಾವಾಣಿ ವಾರ್ತೆ
Published 31 ಜುಲೈ 2025, 15:16 IST
Last Updated 31 ಜುಲೈ 2025, 15:16 IST
ಪ್ರಿಯಾಂಕ್ ಖರ್ಗೆ 
ಪ್ರಿಯಾಂಕ್ ಖರ್ಗೆ    

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸೆಲಿಂಗ್‌ ಮೂಲಕ 1,300 ನೌಕರರನ್ನು ವರ್ಗಾವಣೆ ಮಾಡಲಾಗಿದೆ ಎಂದು ಇಲಾಖಾ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

31 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿಗಳ ಕಾರ್ಯದರ್ಶಿ ಗ್ರೇಡ್‌–1 ಮತ್ತು ಗ್ರೇಡ್‌–2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ ಪ್ರಕ್ರಿಯೆಯನ್ನು ಆನ್‌ಲೈನ್‌ ಕೌನ್ಸೆಲಿಂಗ್‌ ಮೂಲಕ ಪೂರ್ಣಗೊಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ವರ್ಗಾವಣೆಗಾಗಿ ಒಟ್ಟು 2,697 ನೌಕರರಿಂದ ಅರ್ಜಿಗಳು ಸ್ವೀಕೃತವಾಗಿದ್ದವು. ಅರ್ಜಿಗಳ ಪರಿಶೀಲನೆ ಬಳಿಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಅರ್ಹತೆ ಹೊಂದಿದ 1,300 ನೌಕರರ ಕೌನ್ಸೆಲಿಂಗ್‌ ನಡೆಸಿ, ಡಿಜಿಟಲ್‌ ಸಹಿ ಮಾಡಿದ ವರ್ಗಾವಣೆ ಆದೇಶಗಳನ್ನು ಸ್ಥಳದಲ್ಲೇ ವಿತರಿಸಿದರು ಎಂದು ಪ್ರಿಯಾಂಕ್‌ ಹೇಳಿದ್ದಾರೆ.

ADVERTISEMENT

ಜುಲೈ 25 ರಂದು ಮೊದಲ ಮತ್ತು ಎರಡನೇ ಸುತ್ತಿನ ಕೌನ್ಸೆಲಿಂಗ್‌ ನಡೆಸಲಾಯಿತು. ಇದರಲ್ಲಿ ವಿಶೇಷ ಪ್ರಕರಣಗಳಾದ ಗಂಭೀರ ಅನಾರೋಗ್ಯ, ವಿಶೇಷ ಚೇತನರ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಯಿತು. ಮೊದಲ ಮತ್ತು ಎರಡನೇ ಸುತ್ತಿನಲ್ಲಿ 161 ನೌಕರರಿಗೆ, ಜುಲೈ 28 ರಂದು ಎರಡನೇ ಹಂತದಲ್ಲಿ ಸಾಮಾನ್ಯ ಕೋರಿಕೆ ಪ್ರಕರಣಗಳ 619 ನೌಕರರಿಗೆ, ಜು.29 ಮತ್ತು 30 ರಂದು ಕೊನೆಯ ಹಂತದಲ್ಲಿ ಕಡ್ಡಾಯ ವರ್ಗಾವಣೆಯ ಕೌನ್ಸೆಲಿಂಗ್‌ ಅನ್ನು ನಡೆಸಿ, 520 ನೌಕರರಿಗೆ ಡಿಜಿಟಲ್ ಸಹಿ ಮಾಡಿದ ವರ್ಗಾವಣೆ ಆದೇಶ ಪತ್ರಗಳನ್ನು ನೀಡಲಾಯಿತು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.