ADVERTISEMENT

ಸರ್ಕಾರದ ಬೊಕ್ಕಸ ಖಾಲಿಯಾಗಿಲ್ಲ: ಎನ್.ಎಸ್. ಭೋಸರಾಜು

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 18:53 IST
Last Updated 26 ಜೂನ್ 2025, 18:53 IST
<div class="paragraphs"><p>ಎನ್.ಎಸ್. ಭೋಸರಾಜು</p></div>

ಎನ್.ಎಸ್. ಭೋಸರಾಜು

   

ಮಡಿಕೇರಿ: ‘ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ₹ 8 ಸಾವಿರ ಕೋಟಿ ಮೀಸಲಿರಿಸಲಾಗಿದ್ದು, ಮಾರ್ಗ
ಸೂಚಿಗಳನ್ನು ರಚಿಸಿ ಶಾಸಕರಿಗೆ ಹಂಚಿಕೆ ಮಾಡಲು ಸಿದ್ಧತೆ ನಡೆಯುತ್ತಿದೆ. ಸದ್ಯದಲ್ಲೇ ಮುಖ್ಯಮಂತ್ರಿ ಇದನ್ನು ಘೋಷಿಸಲಿದ್ದಾರೆ’ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ
ಎನ್.ಎಸ್. ಭೋಸರಾಜು ತಿಳಿಸಿದರು.

‘ಅನುದಾನ ಹಂಚಿಕೆಯಲ್ಲಿ ತಾರತಮ್ಯ, ಸರ್ಕಾರದಲ್ಲಿ ಹಣ ಇಲ್ಲ’ ಎಂಬ ಆರೋಪಗಳನ್ನು ಕುರಿತು ಕುಶಾಲನಗರದ ಹಾರಂಗಿ ಜಲಾಶಯದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರದ ಬೊಕ್ಕಸ ಖಾಲಿಯಾಗಿಲ್ಲ’ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ಯಾರೋ ಒಂದಿಬ್ಬರು ಶಾಸಕರು ಹೇಳಿದ್ದನ್ನೇ ಮುಂದಿಟ್ಟುಕೊಂಡು ಕೆಲಸ ಇಲ್ಲದ ಪ್ರತಿಪಕ್ಷಗಳು ಹುಸಿ ಆರೋಪಗಳನ್ನು ಮಾಡುತ್ತಿವೆ. ಒಂದಿಬ್ಬರು ಬಿಟ್ಟರೆ ಉಳಿದೆಲ್ಲಾ ಶಾಸಕರಿಗೆ ಯಾವುದೇ ಸಮಸ್ಯೆಯಾಗುತ್ತಿಲ್ಲ. ಶಾಸಕ ಬಿ.ಆರ್.ಪಾಟೀಲ್ ಸಹ ಸಚಿವರಿಂದ ಸಮಸ್ಯೆಯಾಗಿದೆ ಎಂದು ಹೇಳಿಲ್ಲ. ಭಾವುಕ ವ್ಯಕ್ತಿಯಾಗಿರುವ ರಾಜು ಕಾಗೆ ಅವರು ಸ್ಥಳೀಯವಾಗಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗಿರುವ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಈ ಬಗ್ಗೆಯೂ ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನಗಳನ್ನು ನೀಡಿದ್ದಾರೆ’ ಎಂದರು.

ಕ್ಷೇತ್ರಗಳ ಅಭಿವೃದ್ಧಿಗೆ ಎಂದು ₹ 8 ಸಾವಿರ ಕೋಟಿ ಮೀಸಲಿರಿಸಲಾಗಿದ್ದು, ಮಾರ್ಗಸೂಚಿಗಳನ್ನು ರಚಿಸಿ ಶಾಸಕರಿಗೆ ಹಂಚಿಕೆ ಮಾಡಲು ಸಿದ್ಧತೆ ನಡೆಯುತ್ತಿದೆ. ಸದ್ಯದಲ್ಲೇ ಮುಖ್ಯಮಂತ್ರಿಯವರು ಈ ವಿಷಯ ಘೋಷಿಸಲಿದ್ದಾರೆ ಎಂದು
ಎನ್.ಎಸ್. ಭೋಸರಾಜು, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.