ADVERTISEMENT

ಹಿಜಾಬ್ ವಿವಾದ: ನ್ಯಾಯಾಲಯದ ತೀರ್ಮಾನಕ್ಕೆ ಸರ್ಕಾರ ಕಾಯುತ್ತಿದೆ ಎಂದ ಮಾಧುಸ್ವಾಮಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2022, 9:10 IST
Last Updated 9 ಫೆಬ್ರುವರಿ 2022, 9:10 IST
ಜೆ.ಸಿ.ಮಾಧುಸ್ವಾಮಿ
ಜೆ.ಸಿ.ಮಾಧುಸ್ವಾಮಿ   

ಬೆಂಗಳೂರು: ಶಾಲೆ, ಕಾಲೇಜುಗಳಲ್ಲಿ ಹಿಜಾಬ್‌– ಕೇಸರಿ ಶಾಲು ಧರಿಸುವುದಕ್ಕೆ ಅವಕಾಶ ಕೋರಿ ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿರುವ ವಿಚಾರದಲ್ಲಿ ಹೈಕೋರ್ಟ್‌ ತೀರ್ಮಾನಕ್ಕೆ ಕಾಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಬುಧವಾರ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಹಿಜಾಬ್‌ ಧರಿಸಲು ಅವಕಾಶ ನೀಡಬೇಕೆಂಬ ಬೇಡಿಕೆ ಮತ್ತು ನಂತರದ ಬೆಳವಣಿಗೆಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಯಾವುದೇ ನಿಲುವು ಪ್ರಕಟಿಸದೇ ಇರಲು ನಿರ್ಧರಿಸಲಾಗಿದೆ’ ಎಂದರು.

ಸಂಪುಟ ಸಭೆಯಲ್ಲಿ ಹೆಚ್ಚೇನೂ ಚರ್ಚೆ ಮಾಡಿಲ್ಲ. ಸರ್ಕಾರ ನ್ಯಾಯಾಲಯದ ತೀರ್ಮಾನವನ್ನು ಕಾಯಲಿದೆ. ಆ ಬಳಿಕವೇ ಮುಂದಿನ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದರು.

ಶಾಲೆ, ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ಆದೇಶ 1981ರಿಂದಲೂ ಇತ್ತು. ಈಗ ಏಕಾಏಕಿ ಈ ರೀತಿಯ ಬೆಳವಣಿಗೆ ಏಕೆ ನಡೆಯಿತು ಎಂಬುದು ಗೊತ್ತಿಲ್ಲ. ಸಮವಸ್ತ್ರ ಕಡ್ಡಾಯದ ಆದೇಶ ಪಾಲನೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.