
ರಾಜ್ಯಪಾಲ ಥಾವರಚಂದ್ ಗೆಹಲೋತ್–
ಪ್ರಜಾವಾಣಿ ಚಿತ್ರ
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಪ್ರಮಾಣ ಮಾರ್ಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲು, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟುಗಳ ಆಯೋಗಕ್ಕೆ ಅಧಿಕಾರ ನೀಡುವ ತಿದ್ದುಪಡಿ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಸರ್ಕಾರದಿಂದ ಹೊಸ ದತ್ತಾಂಶ ಅಥವಾ ಮಾಹಿತಿ ಸ್ವೀಕರಿಸಿದ ಬಳಿಕ, ಪರಿಶಿಷ್ಟ ಜಾತಿಯ ವಿವಿಧ ಪ್ರವರ್ಗಗಳಿಗೆ ಒಳ ಮೀಸಲಾತಿ ಹಂಚಿಕೆ ಪ್ರಮಾಣದಲ್ಲಿ ಬದಲಾವಣೆ ಮಾಡಿ ಎಂದು ಆಯೋಗವು ಶಿಫಾರಸು ಮಾಡಬಹುದಾಗಿದೆ.
ಇತರ ಮಸೂದೆಗಳು: ಕರ್ನಾಟಕ ಬಾಡಿಗೆ ತಿದ್ದುಪಡಿ ಮಸೂದೆ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ತಿದ್ದುಪಡಿ ಮಸೂದೆ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ತಿದ್ದುಪಡಿ ಮಸೂದೆ, ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ತಿದ್ದುಪಡಿ ಮಸೂದೆ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ತಿದ್ದುಪಡಿ ಮಸೂದೆ.
ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ಮಸೂದೆ, ಕರ್ನಾಟಕ ಭೂ ಕಂದಾಯ 2ನೇ ತಿದ್ದುಪಡಿ ಮಸೂದೆ, ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ, ಕರ್ನಾಟಕ ವಿಶ್ವವಿದ್ಯಾಲಯ ಎರಡನೇ ತಿದ್ದುಪಡಿ ಮಸೂದೆ, ಚಂದ್ರಗುತ್ತಿ ಶ್ರೀರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ.
ಡಿಸಿಎಂಗೆ ಮಸೂದೆ: ರಾಜ್ಯಪಾಲರು ಹಿಂತಿರುಗಿಸಿದ್ದ ಎರಡು ಮಸೂದೆಗಳ ಪೈಕಿ ‘ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಮಸೂದೆ’ಯನ್ನು ಉಪ ಮುಖ್ಯಮಂತ್ರಿಯವರಿಗೆ ಕಳುಹಿಸಲಾಗಿದೆ. ‘ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ’ಯನ್ನು ಹೆಚ್ಚಿನ ವಿವರಣೆ ಪಡೆಯಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಕಳುಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.