ADVERTISEMENT

ರಾಜ್ಯ ಸರ್ಕಾರ ತಿದ್ದುಪಡಿ ತಂದಿದ್ದ ಎರಡು ಮಸೂದೆಗಳಿಗೆ ರಾಜ್ಯಪಾಲರ ಅಂಕಿತ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 22:30 IST
Last Updated 2 ಸೆಪ್ಟೆಂಬರ್ 2025, 22:30 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸೋರಿಕೆ ತಡೆಗಟ್ಟಲು ರಾಜ್ಯ ಸರ್ಕಾರ ತಿದ್ದುಪಡಿ ತಂದಿದ್ದ ‘ಕರ್ನಾಟಕ ಸರಕು ಸೇವೆಗಳ ಮಸೂದೆ- 2025’ ಹಾಗೂ  ₹3,351.96 ಕೋಟಿ ಮೊದಲ ಪೂರಕ ಅಂದಾಜು ಒಳಗೊಂಡ ‘ಕರ್ನಾಟಕ ಧನ ವಿನಿಯೋಗ ಮಸೂದೆ–2025’ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

‘ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌’ ಅನ್ನು ಕೆಲವರು ಅಕ್ರಮವಾಗಿ ಪಡೆದುಕೊಳ್ಳುತ್ತಿದ್ದಾರೆ. ತಂಬಾಕು–ಅಡಿಕೆ ಆಧಾರಿತ ಪದಾರ್ಥಗಳಲ್ಲಿ (ಗುಟ್ಕಾ, ಪಾನ್‌ ಮಸಾಲಾ) ತೆರಿಗೆ ಸೋರಿಕೆ ಆಗುತ್ತಿದ್ದು, ಯಾವ ರೀತಿ ದುರುಪಯೋಗ ಮಾಡುತ್ತಿದ್ದಾರೆ ಎಂಬುದನ್ನು ಹುಡುಕಿ ಅದನ್ನು ತಡೆಗಟ್ಟಲು ‘ಕರ್ನಾಟಕ ಸರಕು ಸೇವೆಗಳ ಕಾಯ್ದೆ’ ನೆರವಾಗಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.