
ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಅಗೌರವ ತೋರಿದ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರುಗಳ ವಿರುದ್ಧ ಕೂಡಲೇ ಶಿಸ್ತು ಕ್ರಮ ಜರುಗಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದಾರೆ.
‘ರಾಜ್ಯಪಾಲರು ಭಾಷಣ ಮುಗಿಸಿ ನಿರ್ಗಮಿಸುವ ಸಂದರ್ಭದಲ್ಲಿ ಸದನದಲ್ಲಿ ಹಾಜರಿದ್ದ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರುಗಳು ಅವರನ್ನು ಅಡ್ಡಗಟ್ಟಿ, ತಳ್ಳಾಡಿ ನೂಕುನುಗ್ಗಲು ಉಂಟು ಮಾಡಿ, ರಾಜ್ಯಪಾಲರಿಗೆ ಆಗೌರವ ತೋರಿದ್ದಾರೆ’ ಎಂದು ಅವರು ಹೇಳಿದ್ದಾರೆ.
‘ಸಂವಿಧಾನದ 175ನೇ ಅನುಚ್ಛೇದದ ಪ್ರಕಾರ ಸದನದ ಆದೇಶದ ಉಲ್ಲಂಘಿಸಿದ ಸದಸ್ಯರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು’ ಎಂದು ಹೇಳಿದ್ದಾರೆ.
ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ವಿಧಾನ ಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿ ಕೇವಲ ಒಂದು ಸಾಲು ಭಾಷಣ ಓದಿ ನಿರ್ಗಮಿಸುತ್ತಿದ್ದಂತೆಯೇ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯರಾದ ಎಸ್. ರವಿ, ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕೆಲವು ಶಾಸಕರು ತಡೆಯಲು ಮುಂದಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.