ಜಿ. ಪರಮೇಶ್ವರ
ಬೆಂಗಳೂರು: ‘ಮೈಕ್ರೊ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರರ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ರೂಪಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಹಿಂದಿರುಗಿಸಿದ್ದಾರೆ. ಅವರು ಎತ್ತಿದ ಆಕ್ಷೇಪಗಳಿಗೆ ಸರ್ಕಾರ ಉತ್ತರ ಕೊಡಲಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ತಪ್ಪು ಮಾಡಿದವರಿಗೆ ಜೈಲು ಶಿಕ್ಷೆ, ದಂಡ ವಿಧಿಸುವ ಅಂಶ ಈ ಸುಗ್ರೀವಾಜ್ಞೆಯಲ್ಲಿದೆ. ಯಾವ ದೃಷ್ಟಿಕೋನದಲ್ಲಿ ರಾಜ್ಯಪಾಲರು ಅದನ್ನು ವಾಪಸ್ ಕಳುಹಿಸಿದ್ದಾರೊ ಗೊತ್ತಿಲ್ಲ’ ಎಂದರು.
‘ಸುಗ್ರೀವಾಜ್ಞೆಯ ಕುರಿತು ವಿಧಾನ ಮಂಡಲದ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಸಲಹೆ ನೀಡಿರುವ ಅವರು, ಕೆಲವು ಅಂಶಗಳ ಸ್ಪಷ್ಟನೆ ಕೇಳಿದ್ದಾರೆ. ಸ್ಪಷ್ಟನೆ ಕೇಳಬಾರದು ಎಂದೇನೂ ಇಲ್ಲ. ಬೇರೆ ರಾಜ್ಯಗಳಲ್ಲೂ ಹೀಗೆ ಆಗುತ್ತಿರುತ್ತದೆ’ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.