
ರಾಜ್ಯಪಾಲ ಥಾವರಚಂದ್ ಗೆಹಲೋತ್
ಪ್ರಜಾವಾಣಿ ಚಿತ್ರ
ಬೆಂಗಳೂರು: ಜನವರಿ 22ರಿಂದ (ಗುರುವಾರ) ಆರಂಭವಾಗುವ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ನಿರಾಕರಿಸಿದ್ದಾರೆ.
ವರ್ಷದ ಆರಂಭದಲ್ಲಿ ನಡೆಯುವ ಜಂಟಿ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ರಾಜ್ಯಪಾಲರು ಓದುವ ಮೂಲಕ ವರ್ಷದ ಕಲಾಪಕ್ಕೆ ಚಾಲನೆ ನೀಡುತ್ತಾರೆ. ಬೆಳಿಗ್ಗೆ11 ಗಂಟೆಗೆ ಈ ಭಾಷಣ ನಿಗದಿಯಾಗಿದೆ. ಜಂಟಿ ಅಧಿವೇಶನದ ಜತೆಜತೆಗೆ ನರೇಗಾ ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಿರುವ ಕೇಂದ್ರ ಸರ್ಕಾರದ ತೀರ್ಮಾನದ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನೂ ಸರ್ಕಾರ ಕರೆದಿದೆ.
ಬುಧವಾರ ಬೆಳಿಗ್ಗೆಯೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿದ್ದ ಲೋಕಭವನದ ಅಧಿಕಾರಿಗಳು, ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಕೈಗೊಳ್ಳುವುದಾದರೆ ರಾಜ್ಯಪಾಲರು ಭಾಗವಹಿಸುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು ಎಂದು ಮೂಲಗಳು ಹೇಳಿವೆ.
ಈ ಬೆಳವಣಿಗೆ ಬೆನ್ನಲ್ಲೇ, ಕಾನೂನು ಸಚಿವ ಎಚ್.ಕೆ. ಪಾಟೀಲ ನೇತೃತ್ವದ ಉನ್ನತ ಮಟ್ಟದ ನಿಯೋಗವು ರಾಜ್ಯಪಾಲರ ಜತೆ ಚರ್ಚಿಸಿ, ಮನವರಿಕೆ ಮಾಡಲು ಲೋಕಭವನಕ್ಕೆ ತೆರಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.