ADVERTISEMENT

ನಾಲ್ಕು ಮಸೂದೆಗಳಿಗೆ ರಾಜ್ಯಪಾಲ ಅಂಕಿತ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2025, 21:30 IST
Last Updated 4 ಏಪ್ರಿಲ್ 2025, 21:30 IST
 ರಾಜ್ಯಪಾಲ ಥಾವರಚಂದ್‌ ಗೆಹಲೋತ್‌
ರಾಜ್ಯಪಾಲ ಥಾವರಚಂದ್‌ ಗೆಹಲೋತ್‌   

ಬೆಂಗಳೂರು: ಶಾಸಕರು ಮತ್ತು ಸಚಿವರ ವೇತನ ಹಾಗೂ ಭತ್ಯೆ ಹೆಚ್ಚಿಸುವ ಮಸೂದೆಗಳೂ ಸೇರಿ ಒಟ್ಟು ನಾಲ್ಕು ಮಸೂದೆಗಳಿಗೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅಂಕಿತ ಹಾಕಿದ್ದಾರೆ.

‘ಕರ್ನಾಟಕ ಗ್ರಾಮ ಹುದ್ದೆಗಳ ರದ್ದಿಯಾತಿ (ತಿದ್ದುಪಡಿ) ಮಸೂದೆ–2025’, ‘ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆ (ತಿದ್ದುಪಡಿ) ಮಸೂದೆ–2025’, ‘ಕರ್ನಾಟಕ ವಿಧಾನಮಂಡಳದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ಮಸೂದೆ–2025’ ಮತ್ತು ‘ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಮಸೂದೆ–2025’ಕ್ಕೆ ರಾಜ್ಯಪಾಲ ಸಹಿ ಮಾಡಿದ್ದಾರೆ.

ಸರ್ಕಾರವು ಇವುಗಳನ್ನು ರಾಜ್ಯಪತ್ರದಲ್ಲಿ ಪ್ರಕಟಿಸಿದ್ದು, ಕಾಯ್ದೆಯಾಗಿ ಜಾರಿಯಾಗಿವೆ.

ADVERTISEMENT

ಕುಲಪತಿ ನೇಮಕ ಮಾಡಿ: ‘ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಶ್ವವಿದ್ಯಾಲಯಕ್ಕೆ ಕುಲಪತಿ ನೇಮಕದಲ್ಲಿ ವಿಳಂಬ ಸಲ್ಲ. ಇನ್ನೊಂದು ತಿಂಗಳಲ್ಲಿ ಕುಲಪತಿ ನೇಮಕ ಮಾಡಿ’ ಎಂದು ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.