ಬೆಂಗಳೂರು: ‘ರಾಜ್ಯಪಾಲರು ಮಸೂದೆಗಳಿಗೆ ಅಂಕಿತ ಹಾಕದೆ ಮಸೂದೆಗಳನ್ನು ತಮ್ಮಲ್ಲೇ ಇಟ್ಟುಕೊಂಡು ಕುಳಿತುಕೊಳ್ಳುವುದು ಸರಿಯಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಸೂದೆಗಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಕಳುಹಿಸಬಹುದು. ಅದರ ಹೊರತಾಗಿ ಸಹಿ ಹಾಕದೆ, ವಿನಾ ಕಾರಣ ತಮ್ಮಲ್ಲಿ ಉಳಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯಲ್ಲ’ ಎಂದರು.
‘ತಮಿಳುನಾಡಿನ ಪ್ರಕರಣದಲ್ಲಿ ರಾಜ್ಯಪಾಲರ ಧೋರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಆಕ್ಷೇಪ ಎಲ್ಲ ರಾಜ್ಯಗಳಿಗೂ ಅನ್ವಯವಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.