ADVERTISEMENT

ಕೆಪಿಎಸ್‌ಸಿಗೆ ಎಂಜಿನಿಯರ್‌ಗಳ ನೇಮಕ ಹೊಣೆ: ಕಾರಜೋಳ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 20:15 IST
Last Updated 16 ಡಿಸೆಂಬರ್ 2019, 20:15 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಬೆಂಗಳೂರು: ಮೈತ್ರಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ ಲೋಕೋಪಯೋಗಿ ಇಲಾಖೆಯ 870 ಎಂಜಿನಿ
ಯರುಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ ಎಂದು ಇಲಾಖೆ ಸಚಿವರೂ ಆದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೋಮವಾರ ಸ್ಪಷ್ಟಪಡಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕಮಾಡಿಕೊಳ್ಳುವ ಪ್ರಕ್ರಿಯೆ ನಡೆದಿತ್ತು. ಅಕ್ರಮಗಳು ನಡೆಯುತ್ತಿರುವ ಬಗ್ಗೆ ವ್ಯಾಪಕವಾಗಿ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಜವಾಬ್ದಾರಿಯನ್ನು ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ವಹಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

‘ವಿವಿಧ ಇಲಾಖೆಗಳಿಗೆ ನೇಮಕಾತಿ ಮಾಡಿಕೊಡುವ ಹೊಣೆಯನ್ನು ಕೆಪಿಎಸ್‌ಸಿ ನಿರ್ವಹಿಸುತ್ತಾ ಬಂದಿದೆ. ಈ ಸಂಸ್ಥೆ ಮೂಲಕ ಮಾಡಿಕೊಂಡರೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.