ADVERTISEMENT

ಪ್ರೊ.ಅಮೃತರಿಗೆ ಗೋವಿಂದ ಪೈ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2019, 19:08 IST
Last Updated 20 ಮಾರ್ಚ್ 2019, 19:08 IST
ಪ್ರೊ.ಅಮೃತ ಸೋಮೇಶ್ವರ
ಪ್ರೊ.ಅಮೃತ ಸೋಮೇಶ್ವರ   

ಉಡುಪಿ: ಹಿರಿಯ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ಅವರು ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿಯಿಂದ ನೀಡುವ ಈ ಪ್ರಶಸ್ತಿ ₹ 1 ಲಕ್ಷ ನಗದು ಒಳಗೊಂಡಿದೆ ಎಂದು ಕೇಂದ್ರದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ಬುಧವಾರ ಇಲ್ಲಿ ತಿಳಿಸಿದರು.

ಅನಾರೋಗ್ಯದ ಕಾರಣ ಸೋಮೇಶ್ವರದಲ್ಲಿರುವ ಪ್ರೊ.ಅಮೃತ ಅವರ ನಿವಾಸಕ್ಕೆ ಇದೇ 23ರಂದು ತೆರಳಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಣಿಪಾಲ ಗ್ಲೋಬಲ್‌ ಮುಖ್ಯಸ್ಥ ಟಿ.ವಿ.ಮೋಹನದಾಸ್ ಪೈ ಅವರು ತಮ್ಮ ತಾಯಿ ವಿಮಲಾ ಪೈ ಅವರ ಹೆಸರಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ಪ್ರಶಸ್ತಿ ನೀಡುತ್ತಿದ್ದಾರೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.