ಮುಂಡಗೋಡ (ಉತ್ತರ ಕನ್ನಡ):‘ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಹಾಗೂ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಿಸುವುದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ತಾಲ್ಲೂಕಿನ ಮೈನಳ್ಳಿ ಗ್ರಾಮದಲ್ಲಿ ಬಾಬು ಜಗಜೀವನ್ ರಾಂ ಸಭಾಭವನ ನಿರ್ಮಾಣಕ್ಕೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಆದರೆ ಈಗಾಗಲೆ ಭರವಸೆ ನೀಡಿದಂತೆ ವೇತನ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ. ಸಾರಿಗೆ ನಿಗಮದ ಬೇಡಿಕೆ ಈಡೇರಿಸಿದರೆ ಇನ್ನುಳಿದ 67 ನಿಗಮಗಳಿಗೂ ಅನ್ವಯಿಸುತ್ತದೆ. ಅನುಭವದ ಕೊರತೆಯಿರುವ ಕೆಲ ರಾಜಕಾರಣಿಗಳು ಈ ಮುಷ್ಕರಕ್ಕೆ ಬೆಂಬಲ ನೀಡುವ ಮಾತುಗಳನ್ನಾಡುತ್ತಿರುವುದು ಸರಿಯಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.