ADVERTISEMENT

ಸರ್ಕಾರಿ ಗೋಶಾಲೆ ಆರಂಭವೇ ಆಗಿಲ್ಲ: ಸಚಿವ ಪ್ರಭು ಚವ್ಹಾಣ್‌

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 19:45 IST
Last Updated 22 ಡಿಸೆಂಬರ್ 2021, 19:45 IST
ಪ್ರಭು ಚವ್ಹಾಣ್‌
ಪ್ರಭು ಚವ್ಹಾಣ್‌   

ಬೆಳಗಾವಿ: ‘ರಾಜ್ಯದ 30 ಜಿಲ್ಲೆಗಳಲ್ಲಿ ಸರ್ಕಾರಿ ಗೋಶಾಲೆ ಗಳನ್ನು ಪ್ರಾರಂಭಿಸುವ ಕಾರ್ಯ ಪ್ರಗತಿಯಲ್ಲಿದ್ದು, ಈವರೆಗೆ ಯಾವುದೇ ಗೋಶಾಲೆ ಕಾರ್ಯಾರಂಭ ಮಾಡಿಲ್ಲ’ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

ಬಿಜೆಪಿಯ ಮುನಿರಾಜು ಗೌಡ ಪ್ರಶ್ನೆಗೆ ವಿಧಾನಪರಿಷತ್‌ನಲ್ಲಿ ಬುಧವಾರ ಲಿಖಿತ ಉತ್ತರ ನೀಡಿರುವ ಅವರು, ‘ಸರ್ಕಾರದ ವತಿಯಿಂದ ಗೋಶಾಲೆಗಳ ನಿರ್ಮಾಣಕ್ಕೆ ಎಲ್ಲ ಜಿಲ್ಲೆಗಳಿಗೂ ಅನುದಾನ ಬಿಡುಗಡೆ ಮಾಡ ಲಾಗಿದೆ. ಅದನ್ನು ಬಳಸಿಕೊಂಡು ಜಮೀನು ಸಮತಟ್ಟು ಮಾಡುವ ಕೆಲಸ ನಡೆಯುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

ಜೆಡಿಎಸ್‌ನ ಮರಿತಿಬ್ಬೇಗೌಡ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ‘ಗೋಶಾಲೆಗಳ ನಿರ್ಮಾಣಕ್ಕಾಗಿ ಎಲ್ಲ ಜಿಲ್ಲೆಗಳಿಗೂ ತಲಾ ₹ 50 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಗೋಶಾಲೆ ಗಳನ್ನು ಪ್ರಾರಂಭಿಸುವುದಕ್ಕೆ ಮಾರ್ಗಸೂಚಿಯನ್ನೂ ಹೊರಡಿಸಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.