ADVERTISEMENT

‘ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಣೆಗೆ ಚಿಂತನೆ’; ಸಚಿವ ಆರ್‌. ಅಶೋಕ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 3:42 IST
Last Updated 23 ಸೆಪ್ಟೆಂಬರ್ 2021, 3:42 IST

ಬೆಂಗಳೂರು: ರಾಜ್ಯದಾದ್ಯಂತ ವೈಜ್ಞಾನಿಕವಾಗಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಬುಧವಾರ ‘ಕರ್ನಾಟಕ ಸ್ಟಾಂಪು (ತಿದ್ದುಪಡಿ) ಮಸೂದೆ–2021’ರ ಪರ್ಯಾಲೋಚನೆ ಸಂದರ್ಭದಲ್ಲಿ ಮಾತನಾಡಿದ ಅವರು, ‘ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಆಸ್ತಿಗಳ ಮಾರ್ಗಸೂಚಿ ದರದಲ್ಲಿ ಸ್ವಲ್ಪ ಹೆಚ್ಚಳ ಮಾಡುವುದು ಹಾಗೂ ಉಳಿದ ಪ್ರದೇಶಗಳಲ್ಲಿ ತುಸು ಇಳಿಕೆ ಮಾಡುವ ಪ್ರಸ್ತಾವವಿದೆ. ಕೋವಿಡ್‌ನಿಂದ ನೋಂದಣಿ ವಹಿವಾಟು ಕುಸಿದಿದೆ. ಸ್ಥಿರಾಸ್ತಿ ಮಾರಾಟ ಮತ್ತು ಖರೀದಿಯನ್ನು ಉತ್ತೇಜಿಸುವ ಉದ್ದೇಶದಿಂದ ಮಾರ್ಗಸೂಚಿ ದರ ಪರಿಷ್ಕರಣೆ ಅಗತ್ಯವಿದೆ’ ಎಂದರು.

₹ 35 ಲಕ್ಷದಿಂದ ₹ 45 ಲಕ್ಷದವರೆಗಿನ ಮೌಲ್ಯದ ಅಪಾರ್ಟ್‌ಮೆಂಟ್‌ಗಳ ನೋಂದಣಿ ಮೇಲಿನ ಮುದ್ರಾಂಕ ಶುಲ್ಕವನ್ನು ಶೇಕಡ 5ರಿಂದ ಶೇ 3ಕ್ಕೆ ಇಳಿಕೆ ಮಾಡುವ ಪ್ರಸ್ತಾವವುಳ್ಳ ಕರ್ನಾಟಕ ಸ್ಟಾಂಪು (ತಿದ್ದುಪಡಿ) ಮಸೂದೆ–2021ಕ್ಕೆ ವಿಧಾನ ಪರಿಷತ್‌ ಒಪ್ಪಿಗೆ ನೀಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.