ADVERTISEMENT

ನೌಕರರ ವರ್ಗಾವಣೆ ಮಿತಿ ಶೇ 6 ಕ್ಕೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 20 ಜೂನ್ 2019, 19:45 IST
Last Updated 20 ಜೂನ್ 2019, 19:45 IST

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಮಿತಿಯನ್ನು 2019–20ನೇ ಸಾಲಿಗೆ ಅನ್ವಯಿಸುವಂತೆ ಶೇ 2ರಿಂದ 6ಕ್ಕೆ ಹೆಚ್ಚಳ ಮಾಡಲಾಗಿದ್ದು, ಹಿಂದಿನ ಆದೇಶವನ್ನು ಪರಿಷ್ಕರಿಸಲಾಗಿದೆ.

ವರ್ಗಾವಣೆ ಮಾಡುವ ಸಮಯದಲ್ಲಿ ಖಾಲಿ ಹುದ್ದೆಗಳು ವಿವಿಧ ಜಿಲ್ಲೆಗಳಲ್ಲಿ ಸಮನಾಗಿ ಹಂಚಿಕೆಯಾಗುವಂತೆ ನೋಡಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.

ಹೈದರಾಬಾದ್ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ಕಚೇರಿಗಳಿಗೆ ನೇಮಕಗೊಂಡ ನೌಕರರನ್ನು ವರ್ಗಾವಣೆ ಮಾಡುವಂತಿಲ್ಲ. ನೇಮಕಗೊಂಡ ದಿನದಿಂದ ಕನಿಷ್ಠ 10 ವರ್ಷಗಳ ವರೆಗೂ ಆ ಭಾಗದ ಕಚೇರಿಗಳಲ್ಲೇ ಉಳಿಸಿಕೊಳ್ಳಬೇಕು. ಬೇರೆಡೆಗೆ ವರ್ಗಾವಣೆ ಮಾಡಬಾರದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.