ADVERTISEMENT

ಕುರುಬ ಸಮುದಾಯದ ಎಸ್‌.ಟಿ ಮೀಸಲಾತಿ ಈಡೇರಿಸಲು ಸರ್ಕಾರ ಕಾರ್ಯಪ್ರವೃತ್ತ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 17:33 IST
Last Updated 18 ಜುಲೈ 2021, 17:33 IST
   

‘ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ಬೇಡಿಕೆ ಈಡೇರಿಸಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಕುಲಶಾಸ್ತ್ರ ಅಧ್ಯಯನ ಕಾರ್ಯ ಪ್ರಗತಿಯಲ್ಲಿದೆ. ಮೀಸಲಾತಿ ಪರಾಮರ್ಶೆಗಾಗಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಕಾನೂನಾತ್ಮಕ ಅಭಿಪ್ರಾಯ ಪಡೆದು ಸರ್ಕಾರ ಮೀಸಲಾತಿ ನಿರ್ಧಾರ ಕೈಗೊಳ್ಳಲಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲ್ಲೂಕಿನ ಮೈಲಾರ ಸುಕ್ಷೇತ್ರದ ಕಾಗಿನೆಲೆ ಶಾಖಾ ಮಠದಲ್ಲಿ ₹10 ಕೋಟಿ ವೆಚ್ಚದ ವಸತಿ ಶಾಲೆ ಮತ್ತು ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಭಾನುವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ಕಲ್ಪಿಸುವಂತೆ ಐತಿಹಾಸಿಕ ಪಾದಯಾತ್ರೆಯ ಮೂಲಕ ಹಕ್ಕೊತ್ತಾಯ ಮಂಡಿಸಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ಈ ಪ್ರಸ್ತಾವವನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಆಗ್ರಹಿಸಿದರು.

ADVERTISEMENT

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ,ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ತೋಟಗಾರಿಕೆ ಸಚಿವ ಆರ್.ಶಂಕರ್, ಶಾಸಕ ಪಿ.ಟಿ.ಪರಮೇಶ್ವರನಾಯ್ಕ,ಸಂಸದ ವೈ.ದೇವೇಂದ್ರಪ್ಪ,ಎಚ್.ಎಂ.ರೇವಣ್ಣ,ವಿರೂಪಾಕ್ಷಪ್ಪ, ಬಿ.ಚಂದ್ರನಾಯ್ಕ, ಕುರುಬ ಸಮಾಜದ ಅಧ್ಯಕ್ಷ ಹೊಸ್ಕೇರಿ ಬೀರಪ್ಪ, ಮುಖಂಡ ಗಾಜಿಗೌಡ್ರು, ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಭರಮಪ್ಪ ಇಟಿಗಿ, ನಾಗಮ್ಮ ಕುಂದಗೋಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.