ಬೆಂಗಳೂರು: ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಜೂನ್ 23 ರಿಂದ ಆರಂಭಿಸಿ, ಜುಲೈ 28ರ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಿಗೆ ಶೇ 9ರಷ್ಟು ಕಡ್ಡಾಯ ಸಾರ್ವಜನಿಕ ಹಿತಾಸಕ್ತಿ–ಸಾಮಾನ್ಯ ಕೋರಿಕೆ ವರ್ಗಾವಣೆ ಹಾಗೂ ಶೇಕಡಾ 6ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆಗಳನ್ನು ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು ಎಂದಿದ್ದಾರೆ.
ಜೂನ್ 23ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುವುದು, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದವರು ವರ್ಗಾವಣೆಗೆ ಅರ್ಹರು. ಗರಿಷ್ಠ ಐದು ವರ್ಷ ಸೇವೆ ಸಲ್ಲಿಸಿರುವರನ್ನು ಕಡ್ಡಾಯ ವರ್ಗಾವಣೆಗೆ ಬರುತ್ತಾರೆ. ಜೂನ್ 24ರಂದು ಖಾಲಿ ಹುದ್ದೆಗಳ ಜಿಲ್ಲಾವಾರು ಪಟ್ಟಿ ಪ್ರಕಟಿಸಲಾಗುವುದು. ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಆಕ್ಷೇಪಣೆ ಸಲ್ಲಿಸಲು ಜೂನ್ 26 ಕೊನೆಯ ದಿನವಾಗಿದೆ. 30ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ವರ್ಗಾವಣೆ ಹಾಗೂ ವಿಸ್ತರಣೆ ಅರ್ಜಿಗಳನ್ನು ಜುಲೈ 2ರ ಒಳಗೆ ಸಲ್ಲಿಸಬೇಕು. ಜುಲೈ 14ರಂದು ಸಾರ್ವಜನಿಕ ಹಿತಾಸಕ್ತಿಯ ಅಂತಿಮ ವರ್ಗಾವಣೆ ಆದ್ಯತಾ ಪಟ್ಟಿ, 18ರಂದು ಪತಿ–ಪತ್ನಿ ಪ್ರಕರಣದಡಿ ಅಂತರ್ ಜಿಲ್ಲಾ ವರ್ಗಾವಣೆಗೆ ಆದ್ಯತಾ ಪಟ್ಟಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಜುಲೈ 22ರಂದು ಪತಿ–ಪತ್ನಿ ಪ್ರಕರಣದಡಿ ಅಂತರ್ ಜಿಲ್ಲಾ ವರ್ಗಾವಣೆಗೆ ಕೌನ್ಸೆಲಿಂಗ್, 24ರಂದು ವಿಶೇಷ ಪ್ರಕರಣಗಳ ಎರಡನೇ ಸುತ್ತಿನ ಕೌನ್ಸೆಲಿಂಗ್, 25ರಂದು ಮಾನ್ಯ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್, 28ರಂದು ಸ್ಥಳ ನಿರೀಕ್ಷಣೆಯಲ್ಲಿರುವ ಮತ್ತು ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ನಡೆಸಲಾಗುತ್ತದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.