ADVERTISEMENT

ಸ್ಥಳೀಯ ಸಂಸ್ಥೆ: 314 ಸ್ಥಾನಗಳಿಗೆ ಮೇ 20ರಂದು ಚುನಾವಣೆ

ಮೇ 20 ರಂದು ಮತದಾನ

​ಪ್ರಜಾವಾಣಿ ವಾರ್ತೆ
Published 16 ಮೇ 2022, 19:45 IST
Last Updated 16 ಮೇ 2022, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಇದೇ ಜುಲೈ ಒಳಗೆ ಅವಧಿ ಮುಕ್ತಾಯವಾಗುವ ನಾಲ್ಕು ಗ್ರಾಮ ಪಂಚಾಯಿತಿಗಳ 105 ಸ್ಥಾನಗಳು ಮತ್ತು ರಾಜ್ಯದ ಹಲವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಗೆ ತೆರವಾಗಿರುವ 209 ಸದಸ್ಯ ಸ್ಥಾನಗಳಿಗೆ ಮೇ 20 ರಂದು ಚುನಾವಣೆ ನಡೆಯಲಿದೆ.

ಧಾರವಾಡ ಜಿಲ್ಲೆಯ ಚಾಕಲಬ್ಬಿ, ಬೆಂಗಳೂರು ನಗರ ಜಿಲ್ಲೆಯ ಕಗ್ಗಲೀಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ಯಾಮಗೊಂಡ್ಲು, ಬಾಗಲಕೋಟೆ ಜಿಲ್ಲೆ ಸಾವಳಗಿ ಗ್ರಾಮ ಪಂಚಾಯಿತಿಗಳ 105 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೊತೆಗೆ, ತುಮಕೂರು ಜಿಲ್ಲೆ ಶಿರಾ ನಗರಸಭೆಯ 21 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ದಾವಣಗೆರೆ ಮಹಾನಗರಪಾಲಿಕೆಯ 2, ಚನ್ನಗಿರಿ ಪುರಸಭೆಯ 1, ಆನೆಕಲ್‌ ಪುರಸಭೆಯ 3, ಹೊಳೆನರಸೀಪುರ, ಜೇವರ್ಗಿ ಮತ್ತು ಸಂಕೇಶ್ವರ ಪುರಸಭೆಯ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ADVERTISEMENT

ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಮತ್ತು ಖಾಸಗಿ ನೌಕರರಿಗೆ ರಜೆಯ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.