ADVERTISEMENT

43 ಸಂಸ್ಕೃತ ಶಾಲೆಗಳಿಗೆ ಅನುದಾನ: ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2020, 22:22 IST
Last Updated 16 ಫೆಬ್ರುವರಿ 2020, 22:22 IST
ಸಿ.ಎನ್.ಅಶ್ವತ್ಥನಾರಾಯಣ
ಸಿ.ಎನ್.ಅಶ್ವತ್ಥನಾರಾಯಣ   

ಬೆಂಗಳೂರು: ರಾಜ್ಯದ ವಿವಿಧೆಡೆ ಶಿಕ್ಷಣ ನೀಡುತ್ತಿರುವ 43 ಸಂಸ್ಕೃತ ಶಾಲೆಗಳಿಗೆ ಸರ್ಕಾರದಿಂದ ಅನುದಾನ ನೀಡುವ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ನಗರದ ಬೇಗೂರು ಬ್ರಾಹ್ಮಣ ಸಂಘ ಭಾನುವಾರ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

‘ಅನುದಾನಕ್ಕೆ ಒಳಪಡಿಸುವಂತೆ ಕೋರಿ ಸಂಸ್ಕೃತ ಶಾಲೆಗಳು ಬೇಡಿಕೆ ಸಲ್ಲಿಸಿದ್ದವು. ಈ ಹಿನ್ನೆಲೆಯಲ್ಲಿ ಸಮಿತಿ ರಚಿಸಿದ್ದು, ಎಲ್ಲ 43 ಶಾಲೆಗಳಿಗೂ ಭೇಟಿನೀಡಿ ಪರಿಶೀಲನೆ ನಡೆಸಿ ಅನುದಾನ ನೀಡುವಂತೆ ಶಿಫಾರಸು ಮಾಡಿದೆ. ಈ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.

ADVERTISEMENT

‘ವೇದ, ಉಪನಿಷತ್, ಸಂಸ್ಕೃತ ಅಧ್ಯಯನಕ್ಕೆ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತಿದೆ. ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ನಂತರ ಎಲ್ಲ ವಿ.ವಿ.ಗಳಲ್ಲೂ ಅದರ ಕೇಂದ್ರ ಆರಂಭಿಸಲಾಗುವುದು. ಲೌಕಿಕ ಶಿಕ್ಷಣದ ಜತೆಗೆ ವೇದಾಭ್ಯಾಸಕ್ಕೆ ಅವಕಾಶ ಮಾಡಿಕೊಡಲಾಗುವುದು’ ಎಂದು ಹೇಳಿದರು. ಬೇಗೂರು ಬ್ರಾಹ್ಮಣ ಸಂಘದ ಅಭಿವೃದ್ಧಿಗೆ ಶಾಸಕ ಎಂ.ಕೃಷ್ಣಪ್ಪ ಅವರು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ₹50 ಲಕ್ಷ ನೀಡುವುದಾಗಿ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.