ADVERTISEMENT

ಕೆಕೆಆರ್‌ಡಿಬಿಗೆ ಅನುದಾನ: ಮುಖ್ಯಮಂತ್ರಿ ಅಸಹಾಯಕತೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 19:28 IST
Last Updated 17 ಸೆಪ್ಟೆಂಬರ್ 2020, 19:28 IST
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಹೊರಬಂದ ವಿಶೇಷ ಕೈಪಿಡಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಡುಗಡೆ ಮಾಡಿದರು. ಉಮೇಶ ಜಾಧವ, ರಾಜಕುಮಾರ ಪಾಟೀಲ, ಬಸವರಾಜ ಪಾಟೀಲ ಸೇಡಂ, ಗೋವಿಂದ ಕಾರಜೋಳ, ದತ್ತಾತ್ರೇಯ ಪಾಟೀಲ, ಬಾಬುರಾವ ಚಿಂಚನಸೂರ ಇದ್ದರು

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ ಎಂದು ಹೇಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೊರೊನಾ ಸಂಕಷ್ಟದ ಕಾರಣದಿಂದಾಗಿ ಕಲ್ಯಾಣ ‌ಕರ್ನಾಟಕ ಪ್ರದೇಶ ಅಭಿವೃದ್ಧಿ ‌ಮಂಡಳಿಗೆ ಅಗತ್ಯ ಅನುದಾನ ನೀಡಲು ಸದ್ಯಕ್ಕೆ ಸಾಧ್ಯವಾಗುತ್ತಿಲ್ಲ ಎಂಬ ಅಸಹಾಯಕತೆಯನ್ನೂ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

371 (ಜೆ) ಕೋಶ ಬೆಂಗಳೂರಿನಿಂದ ಕಲಬುರ್ಗಿಗೆ ಸ್ಥಳಾಂತರಿಸುವ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಯ ವಿಳಂಬದ ಬಗ್ಗೆ ಅವರು ಯಾವುದೇ ಪ್ರಸ್ತಾಪ ಮಾಡಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.