ಡಿ.ಕೆ. ಶಿವಕುಮಾರ್
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪೌರಾಡಳಿತ ಸಚಿವ ರಹೀಂ ಖಾನ್ ಅವರ ಖಾತೆಗಳಲ್ಲಿ ಬದಲಾವಣೆ ಮಾಡಿ, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧಿಸೂಚನೆ ಹೊರಡಿಸಿದ್ದಾರೆ.
ಶಿವಕುಮಾರ್ ಅವರು ಜಲಸಂಪನ್ಮೂಲ ಖಾತೆಯ ಜತೆಗೆ ಬೆಂಗಳೂರು ಅಭಿವೃದ್ಧಿ ಖಾತೆ ಹೊಂದಿದ್ದರು. ಬಿಬಿಎಂಪಿ ವಿಭಜಿಸಿ, ಐದು ನಗರ ಪಾಲಿಕೆ ಒಳಗೊಂಡ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಅವರ ಖಾತೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೇರ್ಪಡೆ ಮಾಡಲಾಗಿದೆ. ಜತೆಗೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಗೆ ಒಳಪಟ್ಟ 11 ನಗರ ಸ್ಥಳೀಯ ಸಂಸ್ಥೆಗಳನ್ನೂ ಹೆಚ್ಚುವರಿಯಾಗಿ ವಹಿಸಲಾಗಿದೆ.
ಪೌರಾಡಳಿತ ಸಚಿವ ರಹೀಂಖಾನ್ ಅವರ ಇಲಾಖೆ ಅಧೀನದಲ್ಲಿದ್ದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳನ್ನು ಅವರ ಖಾತೆಯಿಂದ ಕೈಬಿಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.