ADVERTISEMENT

ಗೃಹಲಕ್ಷ್ಮಿ; 31ರಂದು ಮೈಸೂರಿನಲ್ಲಿ ಚಾಲನೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2023, 21:14 IST
Last Updated 18 ಆಗಸ್ಟ್ 2023, 21:14 IST
-ಚಲುವರಾಯಸ್ವಾಮಿ
-ಚಲುವರಾಯಸ್ವಾಮಿ   

ಮಂಡ್ಯ: ‘ಮನೆಯ ಯಜಮಾನಿಗೆ ₹ 2 ಸಾವಿರ ನೀಡುವ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ನಮ್ಮ ನಾಯಕ ರಾಹುಲ್‌ಗಾಂಧಿ ಚಾಲನೆ ನೀಡಲಿದ್ದಾರೆ’ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

‘ವಿವಿಧ ಕಾರಣಗಳಿಂದಾಗಿ ಯೋಜನೆ ಉದ್ಘಾಟನಾ ದಿನಾಂಕವನ್ನು ಮುಂದೂಡಲಾಗಿತ್ತು. ಈಗ ದಿನಾಂಕ ಅಂತಿಮಗೊಂಡಿದ್ದು ಮೈಸೂರಿನಲ್ಲಿ ದೊಡ್ಡ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುವುದು’ ಎಂದರು. ಮೊದಲು ಬೆಳಗಾವಿಯಲ್ಲಿ ಚಾಲನೆ ನೀಡಲು ನಿರ್ಧರಿಸಲಾಗಿತ್ತು. ಈಗ ಸ್ಥಳ ಬದಲಾಯಿಸಿದ ಆದೇಶ ಶುಕ್ರವಾರ ಹೊರಬಿದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT