ADVERTISEMENT

ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷಿನ್ ಖರೀದಿಸಿದ ಮಹಿಳೆ: ವಿಡಿಯೊ ಹಂಚಿಕೊಂಡ ಸಿಎಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಅಕ್ಟೋಬರ್ 2025, 5:43 IST
Last Updated 2 ಅಕ್ಟೋಬರ್ 2025, 5:43 IST
   

ಬೆಂಗಳೂರು: ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು, ಆಯುಧ ಪೂಜೆ ದಿನ ಹೊಸ ವಾಷಿಂಗ್ ಮಷಿನ್ ಖರೀದಿಸಿ ಪೂಜೆ ಸಲ್ಲಿಸಿದ್ದಾರೆ. ಆ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

'ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಅವರು ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮೆಷಿನ್ ಖರೀದಿಸಿ, ಪೂಜಿಸುತ್ತಿರುವ ವಿಡಿಯೊ ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿಸಿತು' ಎಂದಿದ್ದಾರೆ.

ಸ್ತ್ರೀಸಬಲೀಕರಣದ ಆಶಯದೊಂದಿಗೆ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯು ಸ್ತ್ರೀಶಕ್ತಿಯನ್ನು ಆರಾಧಿಸುವ ನವರಾತ್ರಿಯಲ್ಲಿ ಮಹಿಳೆಯೊಬ್ಬರ ಸಂಭ್ರಮಕ್ಕೆ ಕಾರಣವಾಗಿರುವುದು ಹೆಚ್ಚು ಅರ್ಥಪೂರ್ಣ ಮತ್ತು ಸಾರ್ಥಕವೆನಿಸಿದೆ. ಇಂತಹ ಇನ್ನಷ್ಟು ಕುಟುಂಬಗಳ ಖುಷಿಗೆ ನಮ್ಮ ಯೋಜನೆ ಸಾಕ್ಷಿಯಾಗಲಿ ಎಂದು ಆಶಿಸುತ್ತೇನೆ ಎಂದೂ ಅವರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.