ADVERTISEMENT

ರೈತರಿಗೆ ಪರಿಹಾರ ರೂಪದಲ್ಲಿ ನೀಡಲಾಗುವ ಮೊತ್ತಕ್ಕೆ GST ಪಾವತಿ ಸಲ್ಲ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 9 ಮೇ 2025, 16:20 IST
Last Updated 9 ಮೇ 2025, 16:20 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಅಭಿವೃದ್ಧಿ ಯೋಜನೆಗಳಿಗೆ ತಮ್ಮ ಜಮೀನುಗಳನ್ನು ಕಳೆದುಕೊಳ್ಳುವ ರೈತರಿಗೆ ಪರಿಹಾರ ರೂಪದಲ್ಲಿ ನೀಡಲಾಗುವ ಮೊತ್ತಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸುವಂತಿಲ್ಲ’ ಎಂದು ಹೈಕೋರ್ಟ್‌ ಆದೇಶಿಸಿದೆ.

ವಾಣಿಜ್ಯ ತೆರಿಗೆ ಇಲಾಖೆ ನೀಡಿದ್ದ ಷೋಕಾಸ್‌ ನೋಟಿಸ್‌ಗಳನ್ನು ಪ್ರಶ್ನಿಸಿ ನಗರದ ಆರ್‌.ಆಶಾ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಪ್ರಕರಣವೇನು?: 

ಬೆಂಗಳೂರು ಮೆಟ್ರೊ ರೈಲು ಯೋಜನೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಐಎಡಿಬಿ) ಬೆಂಗಳೂರಿನ ಸುತ್ತಮುತ್ತಲ ಪ್ರದೇಶದಲ್ಲಿ ರೈತರಿಂದ ಜಮೀನುಗಳನ್ನು ಸ್ವಾಧೀನಪಡಿಸಿಕೊಂಡಿತ್ತು. ರೈತರು ಇದಕ್ಕೆ ಪರಿಹಾರ ಪಡೆದಿದ್ದರು. ‘ಈ ಪರಿಹಾರ ಧನಕ್ಕೆ ಜಿಎಸ್‌ಟಿ ಪಾವತಿಸಬೇಕು’ ಎಂದು ವಾಣಿಜ್ಯ ತೆರಿಗೆ ಇಲಾಖೆ ರೈತರಿಗೆ ಷೋಕಾಸ್‌ ನೋಟಿಸ್‌ ನೀಡಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.