ADVERTISEMENT

ಜಿಎಸ್‌ಟಿಯಿಂದ ವಿನಾಯಿತಿಗೆ ಅಖಿಲ ಭಾರತ ಕಾರ್ಯನಿರತ ಪತ್ರಕರ್ತರ ಸಂಘ ಮನವಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 0:59 IST
Last Updated 10 ಅಕ್ಟೋಬರ್ 2025, 0:59 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ‘ಮುದ್ರಣ ಮಾಧ್ಯಮಗಳಿಗೆ ಪೂರಕವಾದ ವಸ್ತುಗಳ ಮೇಲೆ ವಿಧಿಸಲಾಗಿರುವ ಜಿಎಸ್‌ಟಿಯಿಂದ ವಿನಾಯಿತಿ ನೀಡಬೇಕು’ ಎಂದು ಅಖಿಲ ಭಾರತ ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯಿಸಿದೆ.

‘ಮುದ್ರಣ ಮಾಧ್ಯಮಕ್ಕೆ ಅಗತ್ಯ ಇರುವ ನ್ಯೂಸ್‌ ಪ್ರಿಂಟ್‌, ಇಂಕ್, ಪ್ರಿಂಟಿಂಗ್‌ ಪ್ಲೇಟ್ಸ್‌‌ ಮೇಲೆ ಜಿಎಸ್‌ಟಿ ವಿಧಿಸಲಾಗಿದೆ. ಇವುಗಳಿಗೆ ವಿನಾಯಿತಿ ಸಿಕ್ಕರೆ ಖಂಡಿತಾ ಖರ್ಚಿನ ಪ್ರಮಾಣ ತಗ್ಗಲಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಬರೆದಿರುವ ಪತ್ರದಲ್ಲಿ ಸಂಘದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.