ADVERTISEMENT

ವಿ.ವಿ. ಕಾಯ್ದೆ ಅಂಗೀಕರಿಸಲು ಸಚಿವರ ಮನವಿ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2018, 18:36 IST
Last Updated 25 ಅಕ್ಟೋಬರ್ 2018, 18:36 IST

ಬೆಂಗಳೂರು:ವಿಶ್ವವಿದ್ಯಾಲಯಗಳ ನೇಮಕಾತಿ ಅಧಿಕಾರ ಮತ್ತು ಕಾಮಗಾರಿ ಟೆಂಡರ್ ಕರೆಯುವ ಅಧಿಕಾರಗಳಿಗೆ ಕತ್ತರಿ ಹಾಕುವ ಕರ್ನಾಟಕ ವಿಶ್ವವಿದ್ಯಾಲಯ ಮಸೂದೆಗೆ ಅಂಗೀಕಾರ ನೀಡುವಂತೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ರಾಜ್ಯಪಾಲರಿಗೆ ಮನವಿ ಮಾಡಿದರು.

ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಗುರುವಾರ ಭೇಟಿಯಾಗಿ ಅವರು ಚರ್ಚೆ ನಡೆಸಿದರು.

ಮಸೂದೆ ಅಂಗೀಕಾರ ಕುರಿತು ಅಡ್ವೊಕೇಟ್‌ ಜನರಲ್‌ ಸಲಹೆ ಪಡೆದು ತೀರ್ಮಾನ ಕೈಗೊಳ್ಳುವುದಾಗಿ ರಾಜ್ಯಪಾಲರು ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ADVERTISEMENT

ಬೆಂಗಳೂರಿನ ‘ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌’ಗೆ ವಿಶ್ವವಿದ್ಯಾಲಯ ಸ್ಥಾನಮಾನ ನೀಡುವ ಕುರಿತು ಸಹ ಆದಷ್ಟು ಬೇಗ ತೀರ್ಮಾನ ಕೈಗೊಳ್ಳುವುದಾಗಿ ರಾಜ್ಯಪಾಲರು ಇದೇ ವೇಳೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.