ಬೆಂಗಳೂರು: ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರನ್ನಾಗಿ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಸೋಮವಾರ ಆದೇಶ ಹೊರಡಿಸಿದೆ.
ಮಂಡ್ಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ದಿನೇಶ್ ಗೂಳಿಗೌಡ ಅವರು ವಿಧಾನಪರಿಷತ್‌ಗೆ ಆಯ್ಕೆ ಆಗಿದ್ದಾರೆ. ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿ ಹಾಗೂ ಮಾಧ್ಯಮ ಘಟಕದ ಉಪಾಧ್ಯಕ್ಷರಾಗಿ ಈ ಹಿಂದೆ ಅವರು ಕಾರ್ಯನಿರ್ವಹಿಸಿದ್ದಾರೆ.
2024ರ ಫೆಬ್ರುವರಿ 19ರಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ನೇಮಿಸಿ ಡಿಪಿಎಆರ್ ಆದೇಶ ಹೊರಡಿಸಿತ್ತು. ಗೂಳಿಗೌಡ ಅವರನ್ನೂ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.