ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ‘ರಾಜ್ಯದ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಮುಂದೊಂದು ದಿನ ಸಂಪೂರ್ಣವಾಗಿ ರದ್ದಾಗಬಹುದು. ಈ ಸರ್ಕಾರವನ್ನು ನಂಬಲು ಸಾಧ್ಯವಿಲ್ಲ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
‘ಗೃಹಲಕ್ಷ್ಮಿ’ ಯೋಜನೆ ಅಡಿಯಲ್ಲಿ ಗೃಹಿಣಿಯರಿಗೆ ಪ್ರತಿ ತಿಂಗಳೂ ₹2,000 ನೀಡಲು ಸಾಧ್ಯವಿಲ್ಲ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ನೀಡಿರುವ ಹೇಳಿಕೆಗೆ ಛಲವಾದಿ ‘ಎಕ್ಸ್’ ನಲ್ಲಿ ಪ್ರತಿಕ್ರಿಯಿಸಿದ್ದಾರೆ.
‘ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂಬುದನ್ನು ಇದು ತೋರಿಸುತ್ತದೆ’ ಎಂದು ಹೇಳಿದ್ದಾರೆ.
‘ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರಚಿಸಿದ ಸರ್ಕಾರವು ಅದರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಅಧಿಕಾರ ಕೊಟ್ಟಿದೆ. ಅವರಿಗಾಗಿ ನೂರಾರು ಕೋಟಿ ರೂಪಾಯಿ ವೆಚ್ಚ ಮಾಡಿದೆ. ಈಗ ಪ್ರತಿ ತಿಂಗಳು ಹಣ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಿರುವುದು ನಿರಾಸೆ ಹುಟ್ಟಿಸಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.