ADVERTISEMENT

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ, PU ಕಾಲೇಜುಗಳ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 15 ಮೇ 2025, 15:58 IST
Last Updated 15 ಮೇ 2025, 15:58 IST
<div class="paragraphs"><p>ಸಚಿವ ಮಧು ಬಂಗಾರಪ್ಪ</p></div>

ಸಚಿವ ಮಧು ಬಂಗಾರಪ್ಪ

   

ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವಧನವನ್ನು ತಲಾ ₹2 ಸಾವಿರ ಹೆಚ್ಚಳ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಪ್ರಸ್ತುತ ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರಿಗೆ ₹10 ಸಾವಿರ, ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹10,500 ಹಾಗೂ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ₹12 ಸಾವಿರ ನೀಡಲಾಗುತ್ತಿದೆ. 2025–26ನೇ ಶೈಕ್ಷಣಿಕ ಸಾಲಿನಿಂದ ಕ್ರಮವಾಗಿ ₹12 ಸಾವಿರ, ₹12,500 ಹಾಗೂ ₹14 ಸಾವಿರ ಪಡೆಯಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.