ADVERTISEMENT

‘ದಲಿತ ಸಿಎಂ’ ಅಭ್ಯರ್ಥಿಗೆ ಯಾರು ಮತ ಹಾಕುತ್ತಾರೆ: ಮಾಜಿ ಸಚಿವ ಎಚ್‌.ಆಂಜನೇಯ

ಮಾಜಿ ಸಚಿವ ಎಚ್‌.ಆಂಜನೇಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 11:28 IST
Last Updated 29 ಜುಲೈ 2022, 11:28 IST
ಎಚ್.ಆಂಜನೇಯ
ಎಚ್.ಆಂಜನೇಯ   

ಚಿತ್ರದುರ್ಗ: ದಲಿತ ಸಮುದಾಯದ ನಾಯಕರು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿದರೆ ಯಾರು ಮತಹಾಕುತ್ತಾರೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಪ್ರಶ್ನಿಸಿದರು.

‘2008ರಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂತಹ ಅವಕಾಶವಿತ್ತು. ಅವರ ನೇತೃತ್ವದಲ್ಲಿಯೇ ವಿಧಾನಸಭಾ ಚುನಾವಣೆ ನಡೆಯಿತು. ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಅಭ್ಯರ್ಥಿಯಾಗುವುದು ಸಮಾಜಕ್ಕೆ ಇಷ್ಟವಾಗುವುದಿಲ್ಲ ಎಂಬುದು ಫಲಿತಾಂಶ ಸಾಬೀತುಪಡಿಸಿದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

‘ದಲಿತ ನಾಯಕರು ಜಾತಿ ಮೀರಿ, ಎಲ್ಲರಿಗೂ ಸಮಾನವಾಗಿ ಬೆಳೆದಿದ್ದಾರೆ. ಅವರನ್ನು ದಲಿತ ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲ. ದಲಿತ ಮುಖ್ಯಮಂತ್ರಿ ಎಂಬ ಚರ್ಚೆಯೇ ಈಗ ಅಪ್ರಸ್ತುತ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಶಾಸಕಾಂಗ ಪಕ್ಷದ ನಾಯಕರನ್ನು ಚುನಾಯಿತ ಜನಪ್ರತಿನಿಧಿಗಳು ಆಯ್ಕೆ ಮಾಡುತ್ತಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.