ADVERTISEMENT

ಪಕ್ಷದಿಂದ ಹೊರಗೆ ಹೋದ ಎಲ್ಲರನ್ನೂ ಕರೆತರಲು ಸಾಧ್ಯವಿಲ್ಲ: ದೇವೇಗೌಡ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2020, 9:59 IST
Last Updated 11 ಫೆಬ್ರುವರಿ 2020, 9:59 IST
ಎಚ್.ಡಿ. ದೇವೇಗೌಡ
ಎಚ್.ಡಿ. ದೇವೇಗೌಡ   

ಬೆಂಗಳೂರು: ಜನತಾದಳ ಪರಿವಾರದಿಂದ ಹೊರಗೆ ಹೋಗಿ ವಿವಿಧ ಪಕ್ಷಗಳಲ್ಲಿ ಸಕ್ರಿಯರಾಗಿರುವವರನ್ನು ಮತ್ತೆ ಪಕ್ಷಕ್ಕೆ ಕರೆತರಲು ಸಾಧ್ಯವಿಲ್ಲ, ಕೆಲಸವಿಲ್ಲದೆ ಮನೆಯಲ್ಲಿ ಕುಳಿತವರನ್ನಷ್ಟೇ ಕರೆತರುವ ಪ್ರಯತ್ನ ಮಾಡಬಹುದು ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.

ಇಲ್ಲಿನ ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ಪಕ್ಷದ ಮಹಾ ಅಧಿವೇಶನದಲ್ಲಿ ಮಾತನಾಡಿದ ಅವರು, 'ಪಕ್ಷವನ್ನು ಮತ್ತೆ ಕಟ್ಟಿ ಬೆಳೆಸಲು ಕನಿಷ್ಠ ಹತ್ತು ತಿಂಗಳು ಬೇಕು, ಆದರೆ ಜನತಾ ಪರಿವಾರವನ್ನು ಒಂದುಗೂಡಿಸುವುದು ಸುಲಭದ ಮಾತಲ್ಲ' ಎಂದರು.

ಪಕ್ಷದ ಪ್ರಾಮಾಣಿಕ ಕಾರ್ಯಕರ್ತರನ್ನು ಕೈಬಿಡುವುದಿಲ್ಲ ಎಂದ ಅವರು, 2023ರಲ್ಲಿ ಪಕ್ಷ ಮತ್ತೆ ಏಕಾಂಗಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈಗಿನಿಂದಲೇ ಸಿದ್ಧತೆ ನಡೆಸಲಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.