ADVERTISEMENT

ಹೂಡಿಕೆದಾರರ ಜಾಗತಿಕ ಸಮಾವೇಶಕ್ಕೆ ಗೈರು: ಕುಮಾರಸ್ವಾಮಿ ಹೇಳಿದ್ದೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಫೆಬ್ರುವರಿ 2025, 11:39 IST
Last Updated 11 ಫೆಬ್ರುವರಿ 2025, 11:39 IST
<div class="paragraphs"><p>ಹೆಚ್‌.ಡಿ.ಕುಮಾರಸ್ವಾಮಿ</p></div>

ಹೆಚ್‌.ಡಿ.ಕುಮಾರಸ್ವಾಮಿ

   

ಬೆಂಗಳೂರು: ಸಂಸತ್ತಿನ ಅಧಿವೇಶನ ನಡೆಯುತ್ತಿರುವುದರಿಂದ ಬೆಂಗಳೂರಿನಲ್ಲಿ ಆರಂಭವಾಗಿರುವ ಕರ್ನಾಟಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಈ ಸಮಾವೇಶವು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ADVERTISEMENT

‘ಸಂಸತ್ತಿನ ಅಧಿವೇಶನ ನಡೆಯುತ್ತಿರುವುದರಿಂದ ಹೂಡಿಕೆ ಸಮಾವೇಶದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ನಮ್ಮ ಸರ್ಕಾರವು ಆತ್ಮನಿರ್ಭರ ಭಾರತ ಪರಿಕಲ್ಪನೆಯ ಮೂಲಕ ವಿಕಸಿತ ಭಾರತ 2047ರ ಗುರಿ ಮುಟ್ಟುವ ನಿಟ್ಟಿನಲ್ಲಿ ಹೂಡಿಕೆಗಳಿಗೆ ಉತ್ತೇಜನ ನೀಡುವುದಕ್ಕೆ ಬದ್ಧವಾಗಿದೆ’ ಎಂದಿದ್ದಾರೆ.

‘ಶೃಂಗಸಭೆಯಲ್ಲಿ ಭಾಗವಹಿಸಿರುವ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು. ಆವಿಷ್ಕಾರ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮಹತ್ವದ ಕೇಂದ್ರವಾಗಿರುವ ಕರ್ನಾಟಕವು ಭಾರತದ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ’ ಎಂದು ಹೇಳಿದ್ದಾರೆ

ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿ ಕೇಂದ್ರವನ್ನಾಗಿ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ನೆರವಾಗುವ, ನಾವೀನ್ಯ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸುವ ಆಶಯದ 'ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ (ಇನ್‌ವೆಸ್ಟ್‌ ಕರ್ನಾಟಕ–2025)' ಇಂದಿನಿಂದ(ಮಂಗಳವಾರ) ಆರಂಭವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.