ADVERTISEMENT

ಮುಖ್ಯಮಂತ್ರಿ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2018, 8:12 IST
Last Updated 22 ನವೆಂಬರ್ 2018, 8:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಸಭೆಗೆ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಯ ಸಕ್ಕರೆ ಕಾರ್ಖಾನೆ ಮಾಲೀಕರು ಬಂದಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಆಯೋಜಿಸಲಾಗಿದೆ.

ಸಕ್ಕರೆ ಕಾರ್ಖಾನೆ ಮಾಲೀಕರಾದ ಮುರುಗೇಶ ನಿರಾಣಿ, ಎಸ್.ಆರ್. ಪಾಟೀಲ, ರಮೇಶ ಜಾರಕಿಹೊಳಿ, ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಆನಂದ್ ನ್ಯಾಮಗೌಡ, ಶ್ರೀಮಂತ್ ಪಾಟೀಲ, ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ಶಿವಾನಂದ ಪಾಟೀಲ ಸೇರಿದಂತೆ ಹಲವರು ಬಂದಿದ್ದಾರೆ. ಮುಖ್ಯಮಂತ್ರಿಗಳು ಬಂದ ಕೂಡಲೇ ಸಭೆ ಆರಂಭವಾಗಲಿದೆ.

ADVERTISEMENT

ಸಕ್ಕರೆ ಕಾರ್ಖಾನೆ ಮಾಲೀಕರಿಂದ ಸಭೆ: ಮುಖ್ಯಮಂತ್ರಿಸಭೆಗೂ ಮೊದಲು ಖಾಸಗಿ ಹೋಟೆಲ್ ನಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತ್ಯೇಕ ಸಭೆ ನಡೆಸಿದರು.

ಈ ಸಭೆಯಲ್ಲಿ‌ ಎಸ್.ಆರ್. ಪಾಟೀಲ, ಮುರುಗೇಶ ನಿರಾಣಿ, ಆನಂದ್ ನ್ಯಾಮಗೌಡ, ಶ್ರೀಮಂತ ಪಾಟೀಲ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.