ADVERTISEMENT

ವಾಜಪೇಯಿ ಅವರಿಗೆ ವಿಶ್ವಾಸ ಮತ ಸಾಬೀತುಪಡಿಸಲು 10 ದಿನ ನೀಡಲಾಗಿತ್ತು- ರೇವಣ್ಣ

​ಪ್ರಜಾವಾಣಿ ವಾರ್ತೆ
Published 19 ಜುಲೈ 2019, 5:27 IST
Last Updated 19 ಜುಲೈ 2019, 5:27 IST
   

ಮೈಸೂರು: ಅಟಲ್ ಬಿಹಾರಿ ವಾಜಪೇಯಿ ಅವರಿಗೆ ವಿಶ್ವಾಸಮತ ಸಾಬೀತುಪಡಿಸಲು 10 ದಿನ ಅವಕಾಶ ನೀಡಲಾಗಿತ್ತು. ವಿಶ್ವಾಸಮತ ಸಾಬೀತುಪಡಿಸುವ ಕುರಿತು ಸ್ಪೀಕರ್ ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು‌
ಮ‌ೂರನೇಯ ಆಷಾಢ ಶುಕ್ರವಾರದಲ್ಲಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಅವರು ಮುಖ್ಯಮಂತ್ರಿ ಕುಮಾರಸ್ಬಾಮಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದರು.


ವಿಶ್ವಾಸಮತಕ್ಕಾಗಿಯೇ ಕುಮಾರಸ್ವಾಮಿ ಅವರು 12ನೇ ತಾರೀಖು ಕೇಳಿದ್ರು. ಅಂದು ಸಭೆ ಕರೆದರೆ ಬಿಜೆಪಿಯವರು ಬರಲಿಲ್ಲ. ಈಗ ಸುಪ್ರೀಂಕೋರ್ಟ್ ಕೆಲವು ನಿರ್ದೇಶನ ನೀಡಿವೆ. ಇಲ್ಲಿ ಯಾರು ಕಾಲ ಹರಣ ಮಾಡ್ತಿದ್ದಾರೆ ಅಂತ ಜನ ನೋಡುತ್ತಿದ್ದಾರೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಸ್ಪೀಕರ್ ತೀರ್ಮಾನ ತೆಗೆದು ಕೊಳ್ಳುತ್ತಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT