ADVERTISEMENT

ಎಚ್‌.ಕೆ.ಪಾಟೀಲ ಅಧಿಕಾರ ಸ್ವೀಕಾರ ಇಂದು

​ಪ್ರಜಾವಾಣಿ ವಾರ್ತೆ
Published 17 ಜನವರಿ 2019, 19:46 IST
Last Updated 17 ಜನವರಿ 2019, 19:46 IST

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ಶಾಸಕ ಎಚ್‌.ಕೆ. ಪಾಟೀಲ ಶುಕ್ರವಾರ (ಜ. 18) ಅಧಿಕಾರ ಸ್ವೀಕರಿಸಲಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಬೆಳಿಗ್ಗೆ 11.30ಕ್ಕೆ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಧ್ಯಮಗೋಷ್ಠಿಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ಮತ್ತು ಶಾಸಕ ರಾಮಲಿಂಗಾ ರೆಡ್ಡಿ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಸಚಿವ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

‘ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಹೆಚ್ಚು ಸ್ಥಾನ ಗಳಿಸುವ ನಿಟ್ಟಿನಲ್ಲಿ ಪಕ್ಷದ ನಾಯಕರು ಮಾರ್ಗದರ್ಶನ ನೀಡಲಿದ್ದಾರೆ’ ಎಂದು ಶಂಕರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.