ಪ್ರಜಾವಾಣಿ ವಾರ್ತೆ
ಬೆಂಗಳೂರು: ಅರಮನೆ ಮೈದಾನದ 15.36 ಎಕರೆಗೆ ₹3,400 ಕೋಟಿ ಮೌಲ್ಯದ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರಗಳನ್ನು ಮೈಸೂರಿನ ರಾಜವಂಶಸ್ಥರಿಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ನೀಡಿದ್ದ ತೀರ್ಪನ್ನು ತ್ರಿಸದಸ್ಯ ಪೀಠ ಅಮಾನತುಗೊಳಿಸಿರುವುದು ರಾಜ್ಯ ಸರ್ಕಾರಕ್ಕೆ ದೊರೆತ ತಾತ್ಕಾಲಿಕ ಜಯ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ದ್ವಿಸದಸ್ಯ ಪೀಠದ ತೀರ್ಪಿನಂತೆ 15.36 ಎಕರೆಗೆ ₹3,400 ಕೋಟಿ ಪಾವತಿಸಿದರೆ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ. ಅಂದಿನ ಬೆಲೆ ₹11 ಕೋಟಿ ನಿಗದಿ ಮಾಡಿ ಆದೇಶ ಹೊರಡಿಸಲಾಗಿತ್ತು ಎಂದರು.
ರಾಜಮನೆತನದವರು ಕೋರ್ಟ್ ಮೊರೆ ಹೋಗಿದ್ದರು. ಆದರೆ, ತಡೆಯಾಜ್ಞೆ ನೀಡಿರಲಿಲ್ಲ. 28 ವರ್ಷಗಳಿಂದ ವಿಚಾರಣೆ ನಡೆಯುತ್ತಿತ್ತು. ₹3,400 ಕೋಟಿ ನೀಡುವಂತೆ ಆದೇಶ ಬಂತು. ಅರಮನೆ ಮೈದಾನ ಸರ್ಕಾರದ ಆಸ್ತಿ. ಟಿಡಿಆರ್ ಕೊಡುವುದು ಸಮಂಜಸವಲ್ಲ. ಅಷ್ಟು ಹಣ ಕೊಟ್ಟರೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ ಎಂದು ತ್ರಿಸದಸ್ಯ ಪೀಠದ ಗಮನಕ್ಕೆ ತಂದೆವು. ಕೋರ್ಟ್ ನಮ್ಮ ಮನವಿ ಪುರಸ್ಕರಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.