ADVERTISEMENT

ವಿಶ್ವನಾಥ್‌–ಯತ್ನಾಳ ಗೋಪ್ಯ ಮಾತುಕತೆ: ರಾಜಕೀಯ ವಲಯದಲ್ಲಿ ಸಂಚಲನ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 13:38 IST
Last Updated 5 ಜುಲೈ 2021, 13:38 IST
ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌, ಶಾಸಕ ಬಸನಗೌಡ ಪಾಟೀಲ ಯತ್ನಾಳ
ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌, ಶಾಸಕ ಬಸನಗೌಡ ಪಾಟೀಲ ಯತ್ನಾಳ   

ಮೈಸೂರು:ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಈ ಇಬ್ಬರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡುತ್ತಿರುವವರು. ಮುಖ್ಯಮಂತ್ರಿ ಬದಲಾವಣೆಗಾಗಿ ಒತ್ತಾಯಿಸುತ್ತಿರುವವರು. ಈ ಇಬ್ಬರ ಭೇಟಿ ಕುತೂಹಲ ಕೆರಳಿಸಿದೆ.

ಸುತ್ತೂರು ಮಠಕ್ಕೆ ಹೋಗಿದ್ರಾ? ಎಂದು ವಿಶ್ವನಾಥ್‌ ಕೇಳಿದ್ದಕ್ಕೆ; ‘ಈ ಹಿಂದೆ ಸಾಕಷ್ಟು ಬಾರಿ ಹೋಗಿದ್ದೆ. ಈ ಬಾರಿ ಹೋಗಿಲ್ಲ. ಎಲ್ಲರಿಗಿಂತ ಸ್ವಲ್ಪ ಡಿಫರೆಂಟ್ ಇರಬೇಕಲ್ವಾ..?’ ಎಂದು ಬಸನಗೌಡ ಪ್ರತಿಕ್ರಿಯಿಸಿದರು.

ADVERTISEMENT

ಚಾಮುಂಡಿ ಬೆಟ್ಟ, ನಂಜನಗೂಡು, ದೇವನೂರು ಮಠ, ಹೊಸ ಮಠಕ್ಕೆ ಭೇಟಿ ನೀಡಿದ್ದ ಯತ್ನಾಳ ವಿಶ್ವನಾಥ್‌ ಜೊತೆ ಉಭಯ ಕುಶಲೋಪರಿ ಹಂಚಿಕೊಂಡರು. ನಂತರ ಇಬ್ಬರೂ ಕೊಠಡಿಯೊಂದರಲ್ಲಿ ಗೋಪ್ಯ ಮಾತುಕತೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.