ADVERTISEMENT

ಸೋತ ಅನರ್ಹರು ಸಚಿವರಾಗಬಾರದು ಎಂದು ಕೋರ್ಟ್‌ ತೀರ್ಪಿನಲ್ಲಿ ಇಲ್ಲ: ವಿಶ್ವನಾಥ್‌ 

​ಪ್ರಜಾವಾಣಿ ವಾರ್ತೆ
Published 7 ಜನವರಿ 2020, 8:34 IST
Last Updated 7 ಜನವರಿ 2020, 8:34 IST
   

ಮೈಸೂರು: ‘ಅನರ್ಹತೆ ವಿಚಾರವಾಗಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನಲ್ಲಿ ಸೋತ ಶಾಸಕರು ಸಚಿವರಾಗಬಾರದು ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ,’ ಎಂದು ಮಾಜಿ ಸಚಿವ ಎಚ್‌. ವಿಶ್ವನಾಥ್‌ ಹೇಳಿದ್ದಾರೆ. ಈ ಮೂಲಕ ತಾವೂ ಸಚಿವ ಸ್ಥಾನದ ಅಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜನವಿರೋಧಿ ಮೈತ್ರಿ ಸರ್ಕಾರದ ಕೈಯಲ್ಲಿ ಪ್ರಜಾಪ್ರಭುತ್ವ ಸಿಲುಕಿತ್ತು. ಹೀಗಾಗಿ 17 ಶಾಸಕರು ರಾಜೀನಾಮೆ ನೀಡುವ ಮೂಲಕ ಪ್ರಜಾಪ್ರಭುತ್ವವನ್ನು ಸ್ವತಂತ್ರಗೊಳಿಸಿದ್ದೇವೆ. ಯಾವುದೇ ಅಧಿಕಾರದ ಆಸೆಯಿಂದ ರಾಜೀನಾಮೆ ನೀಡಲಿಲ್ಲ,’ ಎಂದು ಹೇಳಿದರು.

‘ಸಚಿವ ಸ್ಥಾನ ನೀಡುವುದು ಬಿಜೆಪಿ ಹೈಕಮಾಂಡ್ ಹಾಗೂ ಯಡಿಯೂರಪ್ಪ ಅವರಿಗೆ ಬಿಟ್ಟ ವಿಚಾರ ಎಂದ ಅವರು, ಸೋತ ಅನರ್ಹರಿಗೆ ಸಚಿವ ಸ್ಥಾನ ನೀಡಬಾರದು ಎಂದು ಕೋರ್ಟ್‌ ತೀರ್ಪಿನಲ್ಲಿ ಎಲ್ಲಿಯೂ ಉಲ್ಲೇಖಿಸಿಲ್ಲ,’ ಎಂದೂ ಹೇಳಿದರು.

ADVERTISEMENT

ಇನ್ನು ಬಿಜೆಪಿಯ 15–17ರ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ ಇದೆಲ್ಲವೂ ಸತ್ಯಕ್ಕೆ ದೂರವಾದ ಮಾತು,’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.