ADVERTISEMENT

ಎಚ್1ಎನ್1ಗೆ ಮಹಿಳೆ ಬಲಿ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2018, 20:15 IST
Last Updated 3 ನವೆಂಬರ್ 2018, 20:15 IST

ಅರಕಲಗೂಡು: ತಾಲ್ಲೂಕಿನ ಬರಗೂರು ಗ್ರಾಮದಲ್ಲಿ ಮಹಿಳೆಯೊಬ್ಬರು ಶುಕ್ರವಾರ ಎಚ್1ಎನ್1ನಿಂದ ಮೃತಪಟ್ಟಿದ್ದಾರೆ.

ಗ್ರಾಮದ ನಾಗರಾಜ್ ಎಂಬುವವರ ಪತ್ನಿ ಪ್ರಮೀಳಾ (40) ತೀವ್ರ ಜ್ವರದಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಬಿಜಿಎಸ್ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಎಚ್1ಎನ್1 ಜ್ವರದಿಂದ ಸಾವನಪ್ಪಿರುವುದು ದೃಢಪಟ್ಟಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ADVERTISEMENT

ಶುದ್ಧ ನೀರಿನ ಘಟಕ ತೆರೆಯಿರಿ: ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬರಗೂರು ಗ್ರಾಮದಲ್ಲಿ ಸುಮಾರು ಒಂದು ಸಾವಿರ ಜನಸಂಖ್ಯೆ ಇದ್ದು. ಶುದ್ಧ ನೀರಿನ ಘಟಕ ತೆರೆಯಬೇಕೆಂದು ಜನರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.